ಮೈಸೂರು : ವಿವಿಧ ಸರ್ಕಾರಿ ಯೋಜನೆಗಳಡಿ ನೀಡಿರುವ ಅನುದಾನಗಳನ್ನು ಸದ್ಬಳಕೆ ಮಾಡಿ, ನಿಗಧಿತ ಅವಧಿಯಲ್ಲಿ ಪ್ರಗತಿ ಸಾಧಿಸಿ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳೂ ಆದ ಎಸ್.ಸೆಲ್ವ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕೃಷಿ ಇಲಾಖೆಯಲ್ಲಿ ನೀಡಿರುವಂತಹ ರಾಜ್ಯ ವಲಯ ಯೋಜನೆಗಳಲ್ಲಿ ವಿವಿಧ ಯೋಜನೆಗಳಲ್ಲಿ ಒಟ್ಟು ರೂ.1306 ಹೆಕ್ಟೇರ್ ಹಾಗೂ ಕೇಂದ್ರ ಪುರಸ್ಕೃತ ಯೋಜನೆಯಲ್ಲಿ 18117 ಹೆಕ್ಟೇರ್ ಗುರಿ ಸಾಧಿಸಲಾಗಿದೆ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಒಟ್ಟು 4321 ರೈತರು ನೋಂದಣಿ ಆಗಿದ್ದು, ಇನ್ನೂ ಹೆಚ್ಚಿನ ರೈತರು ನೋಂದಣಿ ಮಾಡಿಸಲು ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ತೋಟಗಾರಿಕೆ ಇಲಾಖೆಯ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಲ್ಲಿ ಒಟ್ಟು ಶೇ 86.50 ಗುರಿ ಸಾಧಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅನುದಾನದಲ್ಲಿ ಶೇ .80% ಗುರಿ ಸಾಧಿಸಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 97% ಅಷ್ಟು ಪ್ರಗತಿ ಸಾಧಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 75 % ಅಭಿವೃದ್ಧಿ ಸಾಧಿಸಿದ್ದು ಶಾಲೆಗೆ ಹೋಗದೆ ಇರುವಂತಹ ಮಕ್ಕಳ ಬಗ್ಗೆ ಪರಿಶೀಲನೆ ಮಾಡಿ ಮುಂದೆ ನಡೆಯುವ ಸಭೆಯಲ್ಲಿ 100% ಫಲಿತಾಂಶವನ್ನು ನೀಡಬೇಕು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಲ್ಲಿ ಸಾಧನೆ ಕಡಿಮೆಯಾಗಿದೆ ಇದರ ಬಗ್ಗೆ ಹೆಚ್ಚು ಕ್ರಮವಹಿಸಬೇಕು ಎಂದು ಹೇಳಿದರು.
ಜಿಲ್ಲಾ ನಗರಾಭಿüವೃದ್ಧಿ ಕೋಶ ಕೇಂದ್ರಕ್ಕೆ 179.11 ಲಕ್ಷ ಅನುಧಾನ ಬಿಡುಗಡೆ ಮಾಡಲಾಗಿದ್ದು, ಅರ್ಹ ಫಲಾನುಭವಿಗಳಿಗೆ ತಲುಪಿಸಿ ಪ್ರಗತಿ ಸಾಧಿಸಬೇಕು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು 98% ಪ್ರಗತಿಯನ್ನು ಸಾಧಿಸಿದೆ ಇದೇ ರೀತಿ ಅಭಿವೃದ್ಧಿಯನ್ನು ಮುಂದುವರೆಸಬೇಕು. ಪಿ.ಎಂ.ಜಿ.ಎಸ್.ಯು ಒಟ್ಟು ಅನುಧಾನ ಪ್ರಯೋಜನವನ್ನು ಪಡೆದುಕೊಳ್ಳಬೇಕು ಇನ್ನೂ ಹೆಚ್ಚು ಪ್ರಗತಿ ಸಾಧಿಸಬೇಕು. ಪಂಚಾಯತ್ ರಾಜ್ ಇಂಜಿನಿಯರಿoಗ್ ವಿಭಾಗದಲ್ಲಿ ಬಾಕಿ ಉಳಿದಿರುವಂತಹ ಕಾಮಗಾರಿಗಳನ್ನು ಆದಷ್ಟು ಬೇಗ ಮುಗಿಸಬೇಕು ಎಂದು ಸೂಚಿಸಿದರು.
ಕಂದಾಯ ಇಲಾಖೆಗೆ ಬಿಡುಗಡೆ ಮಾಡಲಾಗಿರುವ ಅನುಧಾನ ಬಳಸಿಕೊಂಡು ಪ್ರಗತಿ ಸಾಧಿಸಬೇಕು. ಮೈಸೂರು ಜಿಲ್ಲಾ ಕಂದಾಯ ನ್ಯಾಯಾಲಯದ ಬಾಕಿ ಉಳಿದಿರುವ ಪ್ರಕರಣಗಳನ್ನು ಶೀಘ್ರವಾಗಿ ಸರಿಪಡಿಸಬೇಕು. ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಚ್ಛ ಭಾರತ ಮಿಷನ್ ಕಾಮಗಾರಿಯನ್ನು ಅಭಿವೃದ್ಧಿ ಪಡಿಸಿ ಪ್ರಗತಿ ಸಾಧಿಸಿ ಎಂದು ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಅಭಿವೃದ್ಧಿ ಹೊಂದದೆ ಬಾಕಿ ಉಳಿದಿರುವಂತಹ ಕಾಮಗಾರಿಯನ್ನು ಪೂರ್ಣಗೊಳಿಸಬೇಕು, ಸಾಮಾಜಿಕ ಅರಣ್ಯ ವಿಭಾಗದಲ್ಲಿ 8618 ಹೆಕ್ಟೇರ್ ಪ್ರದೇಶದಲ್ಲಿ ಅರಣ್ಯೀಕರಣ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯು ಹಾಸ್ಟೆಲ್ಗಳಿಗೆ ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಳ ಮಾಡಬೇಕು. ಹಾಸ್ಟೆಲ್ಗಳಲ್ಲಿ ಉತ್ತಮ ಗುಣಮಟ್ಟದ ಅಹಾರ ನೀಡಬೇಕು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಪಿ.ಎಂ.ಜನಮನ್ ವನಧನ ವಿಕಾಸ ಯೋಜನೆಡಯಡಿ 1068 ಫಲಾನುಭವಿಗಳು ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಶೇ.80% ಪ್ರಗತಿ ಸಾಧಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು 96% ಗುರಿಯನ್ನು ತಲುಪಿದೆ ಎಂದು ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಅಭಿವೃದ್ಧಿಯನ್ನು ಪರಿಶೀಲಿಸಿದ ಅವರು ಅರಣ್ಯ ಇಲಾಖೆ ಮೈಸೂರು ಪ್ರಾದೇಶಿಕ ವಿಭಾಗ ಶೇ.80% ಅಭಿವೃದ್ಧಿ ಸಾಧಿಸಿದೆ.. ಚೆಸ್ಕಾಂನಲ್ಲಿ ಪ್ರಗತಿಯಲ್ಲಿ ಇರುವ ಕಾಮಗಾರಿ ಅಭಿವೃದ್ಧಿಯನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.
ರೇಷ್ಮೆ ಇಲಾಖೆಯು ರೇಷ್ಮೆ ವಲಯವನ್ನು ಹೆಚ್ಚು ಮಾಡಬೇಕು. ಹೆಚ್ಚು ಇಳುವರಿ ಬರುವ ರೇಷ್ಮೇ ತಳಿಗಳನ್ನು ರೈತರಿಗೆ ಪರಿಚಯ ಮಾಡಬೇಕು. ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅವರು ಮಾತನಾಡಿ ಪ್ರತಿಯೊಂದು ಇಲಾಖೆಯವರು ಉಳಿದಿರುವ ಕಾಮಗಾರಿಗಳನ್ನು ಪರಿಶೀಲಿಸಿ ಅಭಿವೃದ್ಧಿ ಪ್ರಗತಿಯನ್ನು ಸಾಧಿಸಬೇಕು. ಮುಂದೆ ನಡೆಯುವ ಸಭೆಯಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಶೇ. 100% ಫಲಿತಾಂಶವನ್ನು ನೀಡಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಾಧಿಕಾರಿಗಳಾದ ಎಸ್.ಯುಕೇಶ್ ಕುಮಾರ್ ಅವರು ಮಾತನಾಡಿ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ನಡೆಸಿದ ಕಾರ್ಯಕ್ರಮಗಳು, ತಾಲ್ಲೂಕು ಪಂಚಾಯತ್ ಮಟ್ಟದಲ್ಲಿ ಮಾಡಿರುವಂತಹ ಅಭಿವೃದ್ಧಿ ಕಾಮಗಾರಿಗಳ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…