ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಯೋಗ ನಗರವನ್ನಾಗಿಸುವ ಕಾಲ ಸನ್ನಿಹಿತವಾಗಿದೆ ಎಂದು ಮಂಡ್ಯ ಸರ್ಕಾರಿ ಆಯುರ್ವೇದ ಆಸ್ಪತ್ರೆ ಹಿರಿಯ ವೈದ್ಯಕೀಯ ಅಧಿಕಾರಿ ಡಾ.ಸೀತಾಲಕ್ಷ್ಮಿ ಹೇಳಿದರು.
ನಗರದ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಿಳಾ ಮಹಾವಿದ್ಯಾಲಯದಲ್ಲಿ ವೈಜ್ಞಾನಿಕ ಪ್ರಾಣಾಯಾಮ -ಫೌಂಡೇಶನ್ ಟ್ರಸ್ಟ್, ಎಟಿಎಂ ಇಂಜಿನಿಯರಿಂಗ್ ಕಾಲೇಜು, ಬೆಂಗಳೂರಿನ ಆರ್‌ವಿ ಇಂಜಿನಿಯರಿಂಗ್ ಕಾಲೇಜು ಮತ್ತು ಭಾರತೀಯ ಯೋಗ ಸಂಘಟನೆಗಳ ಸಹಕಾರದಲ್ಲಿ ಅಂತಾ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಎರಡು ದಿನಗಳ ರಾಜ್ಯಮಟ್ಟದ ವಿಚಾರ ಸಂಕಿರಣ ‘ಯೋಗ ಪ್ರಾಣೋತ್ಸವ-೨೦೨೫’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಎಲ್ಲರೂ ಒತ್ತಡದ ಬದುಕಿನಲ್ಲಿ ಸಿಲುಕಿದ್ದಾರೆ. ನಮಗೆ ನಾವು ಸಮಯವನ್ನು ಮೀಸಲಿಡದಿದ್ದರೆ, ಮುಂದೆ ಆಸ್ಪತ್ರೆಗಳಿಗೆ ಹಣ ವ್ಯಯ ಮಾಡುವ ಕೆಟ್ಟ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಯೋಗ ಜನರ ಬದುಕನ್ನು ಸದೃಢವಾಗಿಸುವಲ್ಲಿ ಅತ್ಯಂತ ಪರಿಣಾಮಕಾರಿ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರೂ ಯೋಗ ಹಾಗೂ ಪ್ರಾಣಾಯಾಮದ ಮೊರೆ ಹೋಗಬೇಕು. ಆಗ ಮಾತ್ರವೇ ಆರೋಗ್ಯಕರ ಜೀವನ ಸಾಧ್ಯ ಎಂದು ಪ್ರತಿಪಾದಿಸಿದರು.
ಇಂದು ಹೊರ ಆಹಾರ, ಕೊಬ್ಬಿನಾಂಶದ ಊಟ, ಕರಿದ ಆಹಾರ ಮನುಷ್ಯನ ದೇಹದ ಮೇಲೆ ಹಾಗೂ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇಂತಹ ಆಹಾರದ ಅಪಾಯಗಳು ತಿಳಿದಿದ್ದರೂ ಯಾರು ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇವತ್ತು ಕಾಯಿಲೆ ಯಾವ ಕಾರಣದಿಂದ ಬಂದಿದೆ ಎಂಬುದನ್ನು ಕಂಡುಹಿಡಿಯಲಾಗದ ಪರಿಸ್ಥಿತಿ ಬಂದಿರುವುದು ಬೇಸರದ ಸಂಗತಿ ಎಂದು ತಿಳಿಸಿದರು.
ಬೆಂಗಳೂರಿನ ಕ್ಯಾನ್ಸರ್ ಕೇರ್ ಇಂಡಿಯಾ ನ್ಯೂರೋ ಸರ್ಜನ್ ಡಾ.ರಾಜಶೇಖರ ರೆಡ್ಡಿ ಪೊರೆಡ್ಡಿ, ರಾಮಕೃಷ್ಣ ನೈತಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ಸಂಸ್ಥೆಯ ಮಹಾಮೇಧಾನಂದಜೀ ಸ್ವಾಮೀಜಿ, ಎಟಿಎಂ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಎಲ್.ಬಸವರಾಜ್, ಯೋಗ ಗುರು ರಾಘವೇಂದ್ರ ಪೈ, ವೈಜ್ಞಾನಿಕ ಪ್ರಾಣಾಯಾಮ -ಂಡೇಶನ್ ಟ್ರಸ್ಟ್ ಸಂಸ್ಥಾಪಕರಾದ ಡಾ.ದೇವಕಿ ಮಾಧವ್ ಉಪಸ್ಥಿತರಿದ್ದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…