ಮೈಸೂರು

ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ : ಪಿ.ಎಸ್.ವಸ್ತ್ರದ್

ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಏ.26 ರಂದು ನಡೆಯಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ತಿಳಿಸಿದರು.

ಇಂದು ನಗರದ ಟೆನ್ನಿಸ್ ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಅಗತ್ಯ ಮಾಹಿತಿ ಪಡೆಯಲು, ಪ್ರತಿಕ್ರಿಯೆ, ಸಲಹೆ ಹಾಗೂ ದೂರು ಸಲ್ಲಿಸಲು ಅನುಕೂಲ ಆಗುವಂತೆ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.

ಮತದಾರರು ಮತದಾನದಿಂದ ದೂರ ಉಳಿಯಬಾರದು. ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಸದೃಡ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಎನ್.ಎನ್. ಮಧು, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಶಾಂತಾ, ಮಹಾನಗರಪಾಲಿಕೆಯ ಕಾರ್ಯಪಾಲಕ ಅಭಿಯಂತರಾದ ನಾಗರಾಜ್, ವಲಯ ಆಯುಕ್ತರಾದ ರೇಖಾ ಶೆಟ್ಟಿ, ಪರಿಸರ ಅಭಿಯಂತರಾದ ಮೈತ್ರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಆಕಾಶನನ್ನು ಬಾನಿನಲ್ಲಿ ಹಾರಾಡಲು ಕಲಿಸಿದ ಮೈಸೂರಿನ ವಾಕ್- ಶ್ರವಣ ಸಂಸ್ಥೆ

ಅಕ್ಷತಾ ಹೆಣ್ಣಿನ ತಾಯ್ತನ ಆಕೆ ಗರ್ಭವತಿಯೆಂದು ತಿಳಿದಾಗಿನಿಂದಲೇ ಜಾಗೃತವಾಗುತ್ತದೆ. ತನಗೆ ಹುಟ್ಟಲಿರುವ ಮಗುವಿನ ಬಗ್ಗೆ ಅಂದಿನಿಂದಲೇ ಬಣ್ಣಬಣ್ಣದ ಕನಸುಗಳನ್ನು ಕಾಣಲಾರಂಭಿಸುತ್ತಾಳೆ.…

3 hours ago

ವೀರಗಾಸೆಯೇ ಜೀವವಾಗಿರುವ ಕಿರಾಳು ಮಹೇಶ್

ಸಿರಿ ಮೈಸೂರು ಮುಖಕ್ಕೆ ಪ್ರಸಾದನ ಮಾಡಿಕೊಂಡು, ಭಾರೀ ವಸ್ತ್ರ ಧರಿಸಿ, ಕತ್ತಿ ಹಿಡಿದು, ವೀರಭದ್ರನ ಧ್ಯಾನ ಮಾಡಿ ವೇದಿಕೆ ಏರಿ…

3 hours ago

ಕಾಡ ನೋಡಹೋಗಿ ಲಂಟಾನ ಕಂಡು ಬಂದೆ

ಸ್ವಾಮಿ ಪೊನ್ನಾಚಿ ಮಹದೇಶ್ವರನ ಬೆಟ್ಟದ ಪೋಡಿನಿಂದ ಬಂದು ನಮ್ಮ ಮನೆಯಲ್ಲಿ ದನ ಮೇಯಿಸುತ್ತಿದ್ದ ಬೊಮ್ಮ ನನ್ನು ಕಂಡರೆ ನನಗೆ ಅಸಾಧ್ಯ…

3 hours ago

‘ಜನರ ಸೇವೆಗೆ ಎಟುಕದ ಅರಕೆರೆ ನಾಡಕಚೇರಿ’

ಸಿದ್ದೇಗೌಡ ಕೊಡಿಯಾಲ ಸಮಯಕ್ಕೆ ಬಾರದ ಅಧಿಕಾರಿ-ಸಿಬ್ಬಂದಿ:ಜನತೆ ಹೈರಾಣ ಶ್ರೀರಂಗಪಟ್ಟಣ: ತಾಲ್ಲೂಕಿನ ಅರಕೆರೆ ನಾಡಕಚೇರಿಯು ಅವ್ಯವಸ್ಥೆಯ ಗೂಡಾಗಿ ಮಾರ್ಪಟ್ಟಿದೆ. ಈ ನಾಡಕಚೇರಿಯಲ್ಲಿ…

3 hours ago

ಗಣಗೂರು ವ್ಯಾಪ್ತಿಯಲ್ಲಿ ಹೆಚ್ಚಿದ ಕಾಡಾನೆಗಳ ಹಾವಳಿ

ಲಕ್ಷ್ಮೀಕಾಂತ್ ಕೋಮಾರಪ್ಪ ಫಸಲು ನಾಶ, ಕಂಗಾಲಾದ ಕೃಷಿಕರು; ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸೋಮವಾರಪೇಟೆ: ತಾಲ್ಲೂಕಿನ ಗಣಗೂರು ಗ್ರಾಮ ಪಂಚಾಯಿತಿ…

3 hours ago

ಮೈಸೂರು ಆಯ್ತು; ಈಗ ಜಿಲ್ಲೆಗೂ ಹಬ್ಬಿದ ಮಾದಕ ವಸ್ತುವಿನ ಘಾಟು

ಎಚ್.ಎಸ್.ದಿನೇಶ್ ಕುಮಾರ್ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ನಿಲ್ಲದ ದಂಧೆ; ಪ್ರತಿ ಬಾರಿಯೂ ದಂಧೆಗೆ ಹೊಸ ದಾರಿ ಹುಡುಕುವ ದುರುಳರು ಮೈಸೂರು:…

4 hours ago