ಮೈಸೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ ಏ.26 ರಂದು ನಡೆಯಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ ಎಂದು ಭಾರತ ಚುನಾವಣಾ ಆಯೋಗದ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ್ ಅವರು ತಿಳಿಸಿದರು.
ಇಂದು ನಗರದ ಟೆನ್ನಿಸ್ ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರು ಅಗತ್ಯ ಮಾಹಿತಿ ಪಡೆಯಲು, ಪ್ರತಿಕ್ರಿಯೆ, ಸಲಹೆ ಹಾಗೂ ದೂರು ಸಲ್ಲಿಸಲು ಅನುಕೂಲ ಆಗುವಂತೆ ಮತದಾರರ ಸಹಾಯವಾಣಿ 1950ಗೆ ಕರೆ ಮಾಡಬಹುದಾಗಿದೆ ಎಂದು ಅವರು ತಿಳಿಸಿದರು.
ಮತದಾರರು ಮತದಾನದಿಂದ ದೂರ ಉಳಿಯಬಾರದು. ಪ್ರತಿಯೊಬ್ಬರು ತಪ್ಪದೇ ಕಡ್ಡಾಯವಾಗಿ ಮತದಾನ ಮಾಡಿ ಸದೃಡ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಎನ್.ಎನ್. ಮಧು, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಶಾಂತಾ, ಮಹಾನಗರಪಾಲಿಕೆಯ ಕಾರ್ಯಪಾಲಕ ಅಭಿಯಂತರಾದ ನಾಗರಾಜ್, ವಲಯ ಆಯುಕ್ತರಾದ ರೇಖಾ ಶೆಟ್ಟಿ, ಪರಿಸರ ಅಭಿಯಂತರಾದ ಮೈತ್ರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…