ಮೈಸೂರು

ಜನರ ಸಮಸ್ಯೆ ಆಲಿಸಲು ಸಮಯ ನಿಗದಿ ಮಾಡಿ: ಅಧಿಕಾರಿಗಳಿಗೆ ಹೆಚ್‌ಸಿಎಂ ಸೂಚನೆ

ಮೈಸೂರು: ಜನಸ್ಪಂದನ ಕಾರ್ಯಕ್ರಮದ ಮೂಲ ಉದ್ದೇಶ ಆಡಳಿತ ವರ್ಗ ಮತ್ತು  ಜನರ ನಡುವೆ ಹಲವಾರು ಕಂದಕಗಳು ಉದ್ಭವಿಸುತ್ತಿದ್ದು, ಸಾಮಾನ್ಯ ಜನರು ನೇರವಾಗಿ ಅಧಿಕಾರಿಗಳನ್ನು ಭೇಟಿ  ಮಾಡಿ ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗದ ಪರಿಸ್ಥಿತಿ ಇರುವುದರಿಂದ, ಜನರ ಸಮಸ್ಯೆಗಳನ್ನು ಕೇಳಲು ಅಧಿಕಾರಿಗಳು ಸಮಯ ನಿಗದಿ ಮಾಡಿ ಅವರಿಗೆ ಸೂಕ್ತ ಪರಿಹಾರ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತ ವರ್ಗ ಮತ್ತು ಸಾರ್ವಜನಿಕರ ನಡುವೆ ಮಧ್ಯವರ್ತಿಗಳು ಮಧ್ಯ ಪ್ರವೇಶ ಮಾಡಿ ಸರ್ಕಾರದ ಯೋಜನೆಗಳನ್ನು ದುರುಪಯೋಗ ಮಾಡಿ, ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದ್ದರಿಂದ ನೇರವಾಗಿ ಸಾರ್ವಜನಿಕರೊಂದಿಗೆ ಸಂಪರ್ಕ ಇಟ್ಟುಕೊಂಡು , ಮುಕ್ತವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಆಯಾ ಸಂಬಂಧ ಪಟ್ಟ ಇಲಾಖೆಗಳು ಸಾರ್ವಜನಿಕರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪಾರದರ್ಶಕತೆಯಲ್ಲಿ ಆಡಳಿತವನ್ನು ನಡೆಸಬೇಕು ಎಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರ ಹಾಗೂ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸಲಹೆ, ಸೂಚನೆ ಮತ್ತು ಮಾರ್ಗದರ್ಶನಗಳನ್ನು ನೀಡಿ ಉತ್ತಮ ರೀತಿಯಲ್ಲಿ ಸೂಕ್ತ ಪರಿಹಾರ ದೊರಕುವಂತೆ ಮಾಡಲಾಗುವುದು ಎಂದರು.

ಸಾರ್ವಜನಿಕರೆಲ್ಲರು ತ್ವರಿತ ಗತಿಯಲ್ಲಿ ಎಲ್ಲಾ ಅರ್ಜಿಗಳನ್ನು ಡಿಜಿಟಲ್ ರೂಪದಲ್ಲಿ ಆನ್ಲೈನ್ ಮೂಲಕ ಅಥವಾ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.  ಹಾಗೂ ಅರ್ಜಿಗಳು ಸಂಬಂಧಪಟ್ಟ ಇಲಾಖೆಗಳಿಗೆ ತಲುಪಿದ ಒಂದು ವಾರ ಅಥವಾ 10 ದಿನಗಳೊಳಗೆ ಕಾನೂನಿನ ಅನ್ವಯ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ವಿಧಾನ ಪರಿಷತ್ ನ ಸದಸ್ಯ ಮಂಜೇಗೌಡ, ಕೃಷ್ಣರಾಜ ಕ್ಷೇತ್ರದ ಶಾಸಕರಾದ ಶ್ರೀವತ್ಸ, ಮುಡಾ ಅಧ್ಯಕ್ಷರಾದ ಕೆ. ಮರಿಗೌಡ,   ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಂಗೇಗೌಡ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

2 mins ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

7 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

7 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

7 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

7 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

7 hours ago