ಮೈಸೂರು : ಸಿಎಂ ಸಿದ್ದರಾಮಯ್ಯ ನಿನ್ನೆ(ಏ.24) ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಿದ್ದಾರೆ. ಈ ಹಿಂದೆಯೂ ಯಡಿಯೂರಪ್ಪ, ಸಿದ್ದರಾಮಯ್ಯ ಇಬ್ಬರೂ ಕೂಡ ಬೇರೆ ಬೇರೆ ಕಡೆ ಸಚಿವ ಸಂಪುಟ ಸಭೆ ಮಾಡಿದ್ದರು. ಆದರೆ ಫಲಿತಾಂಶ ಮಾತ್ರ ಶೂನ್ಯ ಎಂದು ಎಂಎಲ್‌ಸಿ ಎಚ್ ವಿಶ್ವನಾಥ್ ಕಿಡಿಕಾರಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸಂಪುಟ ಸಭೆ ಮಾಡಿರುವುದರಿಂದ ದುಂದು ವೆಚ್ಚವಾಗಿದೆ. ಇದರ ಫಲಿತಾಂಶವೂ ಶೂನ್ಯವಾಗಲಿದೆ ಎಂದು ಹೇಳಿದ್ದಾರೆ.
ಕೆಆರ್‌ಸಿ ಪ್ರವಾಸೋದ್ಯಮ ಇಲಾಖೆ ನೀಡಿ
ಕಾವೇರಿ ಆರತಿ ಮಾಡುವುದಕ್ಕೆ 93 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ. ಕೆ ಆರ್ ಎಸ್ ಈ ಹಿಂದೆ ಇದ್ದ ರೀತಿ ಇದೆಯಾ? ಎಂದು ಪ್ರಶ್ನಿಸಿದ ಅವರು, ಯೋಜನೆಗಳಿಗೆ ಹಣ ನೀಡಿದರೆ ಅಧಿಕಾರಿಗಳು ದುರುಪಯೋಗ ಮಾಡಿಕೊಳ್ತಾರೆ. ಕೆ.ಆರ್.ಎಸ್ ಅನ್ನು ನೀರಾವರಿ ಇಲಾಖೆಗೆ ಬದಲು ಪ್ರವಾಸೋದ್ಯಮ ಇಲಾಖೆಯ ಸುಪರ್ದಿಗೆ ನೀಡಬೇಕು ಆಗ್ರಹಿಸಿದರು.
ಇಡೀ ಇಸ್ಲಾಮಿಕ್ ರಾಷ್ಟ್ರಗಳು ಜಾಗತೀಕವಾಗಿ ಧರ್ಮಾಧಾರಿತವಾಗಿ ನಡೆದುಕೊಳ್ಳುತ್ತಿವೆ. ನೆರೆಯ ಪಾಕಿಸ್ತಾನ ಕೂಡ ಧರ್ಮಾಧಾರಿತ ದೇಶವಾಗಿದೆ. ಅಲ್ಲಿ ಧರ್ಮದ ಆಧಾರದ ಮೇಲೆ ಆಡಳಿತ ನಡೆಯುತ್ತಿದೆ. ನಮ್ಮದು ಜಾತ್ಯಾತೀತ ರಾಷ್ಟ್ರವಾಗಿದೆ. ಕಾಶ್ಮೀರ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬೆಂಬಲ ನೀಡಬೇಕು.
ಉಗ್ರರ ದಾಳಿ ಕುರಿತು ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಅಪ್ರಸ್ತುತ. ಪ್ರಿಯಾಂಕಾ ಗಾಂಧಿ ಪತಿ ಎಂಬ ಕಾರಣಕ್ಕೆ ವಾದ್ರಾ ಏನೇನೋ ಮಾತನಾಡಬಾರದು ಎಂದು ಹೇಳಿದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್‌ಎಸ್‌ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…