ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತಯಾಚಿಸಿದ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ್ ಬಿಸಿ ತಟ್ಟಿದೆ.
ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ಜನರು ಯತೀಂದ್ರ ಅವರನ್ನು ತರಾಟೆಗೆ ತೆಗದುಕೊಂಡ ಘಟನೆ ನಡೆದಿದೆ.
ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ನಿರತ ರೈತರನ್ನು ಭೇಟಿಯಾಗಿ ಮತ ಯಾಚಿಸಿದರು. ಈ ವೇಳೆ, ಬೇಡಿಕೆಗಳನ್ನು ಈಡೇರಿಸುವಂತೆ ಯತೀಂದ್ರರನ್ನು ರೈತರು ಒತ್ತಾಯಿಸಿದರು.
ಪ್ರತಿಭಟನಾ ನಿರತ ರೈತರನ್ನು ಓಲೈಸಲು ಯತೀಂದ್ರ ಅವರನ್ನು ರೈತರು ಲೆಕ್ಕಿಸದೇ ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ ಎಂದು ರೈತರು ಹೇಳಿದರು. ಇದಕ್ಕುತ್ತರಿಸಿದ ಯತೀಂದ್ರ, ಇದನ್ನು ನಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದರು. ಈ ಮಾತಿನಿಂದ ಸಿಟ್ಟಿಗೆದ್ದ ಪ್ರತಿಭಟನಾಕಾರರು ನಮ್ಮ ಬೇಡಿಕೆಯನ್ನು ಈಗಲೇ ಈಡೇರಿಸಿ. ಇಲ್ಲದಿದ್ದರೆ, ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…
ಬೆಳಗಾವಿ : ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ…
ಬೆಳಗಾವಿ : ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ…
ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…
ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…