ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ ನಿದ್ರಿಸುತ್ತಿದ್ದವನ ಮೇಲೆ ಕಾರೊಂದು ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾ ಮುಂಜಾನೆ ನಡೆದಿದೆ.
ತಾಲ್ಲೂಕಿನ ಗಟ್ಟವಾಡಿ ಗ್ರಾಮದ ನಿವಾಸಿ ಪ್ರದೀಪ್ ಕುಮಾರ್ (೩೩) ಮೃತಪಟ್ಟವರು. ಆತನ ಸ್ನೇಹಿತ ಅದೇ ಗ್ರಾಮದ ನಿವಾಸಿ ರವಿ (೩೦)ಎಂಬಾತ ತೀವ್ರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರದೀಪ್ ಕುಮಾರ್ ಹಾಗೂ ರವಿ ಜಾತ್ರೆಗೆ ಬಂದವರು ಭಾನುವಾರ ರಾತ್ರಿ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ರಾತ್ರಿ ನಾಟಕ ನೋಡಿಕೊಂಡು ಬಳಿಕ ಊರಿಗೆ ತೆರಳಲು ಮುಂದಾಗಿದ್ದರು. ಆದರೆಮಧ್ಯರಾತ್ರಿ ಬಸ್ಸು ಲಭ್ಯವಿಲ್ಲದ ಕಾರಣ ರಂಗಸ್ಥಳದ ಪಕ್ಕದ ಕುಪ್ಪರವಳ್ಳಿ ರಸ್ತೆಯ ತಾತ್ಕಾಲಿಕ ವಾಹನ ಪಾರ್ಕಿಂಗ್ ಆವರಣದ ಸ್ಥಳದಲ್ಲಿ ಟಿಕೆಟ್ ವಿತರಣೆ ಕೆಲಸ ಮಾಡುತ್ತಿದ್ದ ತನ್ನ ಸ್ನೇಹಿತ ಗಟ್ಟವಾಡಿ ಗ್ರಾಮದ ರವಿ ಎಂಬಾತನೊಂದಿಗೆ ಪಾರ್ಕಿಂಗ್ ಸ್ಥಳದಲ್ಲಿನ ಟಿಕೆಟ್ ಕೌಂಟರ್‌ನಲ್ಲಿ ಮಲಗಿದ್ದರು. ಸೋಮವಾರ ಮುಂಜಾನೆ ೩ ಗಂಟೆ ವೇಳೆಯಲ್ಲಿ ಅಪರಿಚಿತ ಕಾರು ಮಲಗಿದ್ದವರ ಮೇಲೆ ಹರಿದಿದೆ. ಆ ಕಾರಿನ ಚಾಲಕನ ಅಜಾಗ ರೂಕತೆ ಮತ್ತು ಅತಿ ವೇಗದಿಂದ ನಿದ್ರೆಯಲ್ಲಿದ್ದ ಪ್ರದೀಪ್ ಕುಮಾರ್ ಮತ್ತು ರವಿ ಅವರ ಮೇಲೆ ಕಾರು ಹರಿಸಿದ ಪರಿಣಾಮ ಕಾರಿನ ಚಕ್ರ ಪ್ರದೀಪನ ತಲೆಯ ಮೇಲೆ ಚಲಿಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಆತನ ಸ್ನೇಹಿತ ರವಿಯ ತಲೆ, ಮುಖ ಮತ್ತು ಕಾಲಿಗೆ ತೀವ್ರವಾ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೃತ ಪ್ರದೀಪ್ ಕುಮಾರ್ ಪತ್ನಿ ಅಂಬಿಕಾ ಬಿಳಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಿದರು.
ಈ ಬಗ್ಗೆ ಮಾಹಿತಿ ಪಡೆದುಕೊಂಡ ಶಾಸಕ ದರ್ಶನ್ ಧ್ರುವನಾರಾಯಣ ಸೋಮವಾರ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್‌ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…
ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ…