ಮೈಸೂರು

ಮೈಸೂರು | ಗನ್‌ ಹಿಡಿದು ರೀಲ್ಸ್‌ , ಖಾಕಿ ಗ್ರೀಲ್‌

ಮೈಸೂರು : ಯುವಜನರಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್‌ ಆಗುವ ಹುಚ್ಚು ಕಡಿಮೆಯೇನಿಲ್ಲ. ಹೀಗಾಗಿ, ತರಹೇವಾರಿ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚುವುದು ಸರ್ವೇ ಸಾಮಾನ್ಯವಾಗಿದೆ. ಅಂತದ್ದೆ ಇಲ್ಲೊಂದು ಘಟನೆ ನಡೆದಿದೆ. ಯುವಕನೊಬ್ಬ ಗನ್‌ ಹಿಡಿದು, ಸರ್ಕಾರಿ ಕಾರು ಬಳಸಿ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.

ನಗರದ ಟಿ.ಕೆ ಬಡಾವಣೆಯ ವಿನೋದ ಎಂಬ ಯುವಕ ಗನ್‌ ಹಿಡಿದು ವೀಡಿಯೋ ಮಾಡಿದ್ದಾನೆ. ಈತ ಜ್ಯೂವೆಲರಿ ಅಂಗಡಿಯೊಬ್ಬರ ಮಗ ಎನ್ನಲಾಗಿದೆ. ಗನ್‌ ಹಿಡಿದು ಸರ್ಕಾರಿ ಕಾರಿನಲ್ಲಿ ವೀಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾನೆ. ಇದೀಗ ಅದು ಎಲ್ಲೆಡೆ ವೈರಲ್‌ ಆಗಿದೆ.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸರಸ್ವತಿಪುರಂ ಹಾಗೂ ಕೃಷ್ಣರಾಜ ಸಂಚಾರ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ. ವಿಚಾರಣೆ ವೇಳೆ ಆತ ಇದು ಹಳೆಯ ವಿಡಿಯೋ ಎಂದು ಮಾಹಿತಿ ನೀಡಿದ್ದಾನೆ.

ಅಲ್ಲದೇ, ತಾನು ಹಿಡಿದಿರುವುದು ಅಸಲಿ ಗನ್‌ ಅಲ್ಲ, ಅದು ಪಟಾಕಿ ಗನ್‌, ರೀಲ್ಸ್‌ಗಾಗಿ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಸರ್ಕಾರಿ ವಾಹನ ಯಾವುದು ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

6 mins ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

18 mins ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

24 mins ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

58 mins ago

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

ಅಮೇರಿಕಾದಲ್ಲಿ ಡೊನಾಲ್ಡ್‌ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ 80 ಲಕ್ಷ ಜನರಿಂದ ನೋ ಕಿಂಗ್ಸ್‌ ಚಳುವಳಿ ಟ್ರಂಪ್‌ ನೀತಿ ವಿರೋಧಿಸಿ…

1 hour ago

ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

೫೦ ಜೆಸಿಬಿ, ೩೦ ಟಿಪ್ಪರ್‌ಗಳು, ೮ ಟ್ರಾಕ್ಟರ್‌ಗಳು, ೫೦೦ ಮಂದಿ ಪೌರಕಾರ್ಮಿಕರು ಭಾಗಿ ಮೈಸೂರು: ನಗರದ ಹೊರ ವರ್ತುಲ ರಸ್ತೆಯಲ್ಲಿ…

2 hours ago