ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ.
ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ಮಾರ್ಚ್.1ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ ವಿಶೇಷವಾದ ಹಿನ್ನೆಲೆಯಲ್ಲಿ ವಾಹನದಲ್ಲಿ ಬೆಟ್ಟದಿಂದ ಬೆಂಗಳೂರಿಗೆ ಕಾರ್ಯಾಚರಣೆ ಮಾಡುವಾಗ ಕೆ.ಎಂ.ದೊಡ್ಡಿಯ ಬೋರಾಪುರ ಗೇಟ್ ಬಳಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿಯಾಗಿ ಕಾರು ಚಾಲಕ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದರು.
ಇದರಿಂದ ತೀವ್ರ ಮನನೊಂದಿದ್ದ ಚಾಲಕ ರಾಜೇಂದ್ರ ಅವರು, ಮನೆಗೆ ಹೋಗದೇ ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದರು. ಇಂದು ಅವರ ಶವ ಮೈಸೂರು ಬಳಿ ಇರುವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಮೈಸೂರು ನಗರ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಮೃತ ರಾಜೇಂದ್ರರಿಗೆ ಇಬ್ಬರು ಮಕ್ಕಳು ಹಾಗೂ ವಯಸ್ಸಾದ ತಂದೆ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…