ಮೈಸೂರು

ನಂಜನಗೂಡು | ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ

ಮೈಸೂರು : ಜಿಲ್ಲೆಯ ನಂಜನಗೂಡಿನ ಪ್ರೇಮಿಗಳಾದ ಎಂ. ಸಂತೋಷ್‌ ಹಾಗೂ ಸಿ. ರಂಜಿತಾ ಅವರ ವಿವಾಹವು ಮಂತ್ರ ಮಾಂಗಲ್ಯದ (Mantra Mangalya) ಮೂಲಕ ಸರಳವಾಗಿ ನಡೆಯಿತು.

ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಎಂ. ಸಂತೋಷ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ಸಿ.ರಂಜಿತಾ ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಆಗಿದ್ದಾರೆ.

ಈ ಜೋಡಿಗಳು ಅಂತರ ಜಾತಿಯಾಗಿದ್ದರೂ ಎರಡು ಕುಟುಂಬದ ಒಪ್ಪಿಗೆ ಪಡೆದು ಮಂತ್ರ ಮಾಂಗಲ್ಯ ಮೂಲಕ ವೈವಾಹಿಕ ಜೀವನಕ್ಕೆ ಕಾಲಿಟ್ಟಿವೆ. ಇದು ಮಾದರಿ ಎಂಬಂತೆ ನಡೆದಿರುವುದು ವಿಶೇಷ..

ಮಾನವ ಬಂಧುತ್ವ ವೇದಿಕೆಯ ಮುಖ್ಯಸ್ಥ ಉಗ್ರ ನರಸಿಂಹೆಗೌಡ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹ ಸಂಹಿತೆ ಬೋಧಿಸಿದರು. ಇದೇ ಸಂದರ್ಭದಲ್ಲಿ ಅನೇಕ ಪ್ರಗತಿಪರ ಚಿಂತಕರು ಮದುವೆಯಲ್ಲಿ ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago