ಮೈಸೂರು

ಮೈಸೂರು| ಲಾಡ್ಜ್‌ನಲ್ಲಿ ಪ್ರಿಯಕರನಿಂದ ವಿವಾಹಿತ ಮಹಿಳೆ ಕೊಲೆ

ಮೈಸೂರು: ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆಯೇ ಕೊಲೆಯಾದ ಮಹಿಳೆಯಾಗಿದ್ದಾಳೆ. ಪಿರಿಯಾಪಟ್ಟಣದ ಬಿಳೆಕೆರೆ ಗ್ರಾಮದ ಸಿದ್ದರಾಜು ಎಂಬಾತನೇ ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.

ಕೇರಳ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದ ರಕ್ಷಿತಾ ಸಿದ್ದರಾಜು ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಹೀಗಿರುವಾಗಲೇ ಸಿದ್ದರಾಜು ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂದು ರಕ್ಷಿತಾಳನ್ನು ಕರೆದು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾನೆ.

ಕೊಲೆಯನ್ನು ಮುಚ್ಚಿಹಾಕಲು ಮೊಬೈಲ್‌ ಬ್ಲಾಸ್ಟ್‌ ಎಂದು ಕೂಗಾಡಿದ್ದ. ಈ ವೇಳೆ ಅಲ್ಲಿದ್ದ ಹೋಟೆಲ್‌ ಸಿಬ್ಬಂದಿ ಸ್ಥಳದಲ್ಲಿ ಮೊಬೈಲ್‌ ಹುಡುಕಿದರೂ ಸಿಗದ ಕಾರಣ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದು, ಆರೋಪಿ ಸಿದ್ದರಾಜು ಅಸಲಿ ವಿಷಯವನ್ನು ಪೊಲೀಸರ ಮುಂದೆ ಬಾಯ್ದಿಟ್ಟಿದ್ದಾನೆ. ಈ ಸಂಬಂಧ ಸಾಲಿಗ್ರಾಮ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

22 mins ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

25 mins ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

27 mins ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

28 mins ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

31 mins ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

36 mins ago