ಮೈಸೂರು: ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.
ಇಂದು ನೂರಾರು ಜೋಡಿಗಳು ಶ್ರೀಕ್ಷೇತ್ರ ಸುತ್ತೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅದರಲ್ಲಿ ವಿಶೇಷವಾಗಿ ಅಂದ ಜೋಡಿಗಳು ಎಲ್ಲರ ಗಮನ ಸೆಳೆದಿವೆ.
ಉಚಿತ ಸಾಮೂಹಿಕ ವಿವಾಹದಲ್ಲಿ 150ಕ್ಕೂ ಹೆಚ್ಚು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಜಾತಿ-ಮತಭೇದವಿಲ್ಲದೇ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಶರ್ಟ್‌ಗಳನ್ನು ನೀಡಲಾಗಿತ್ತು.
ಇದರಲ್ಲಿ ವಿಶೇಷಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಂಡಿದ್ದು ಅಂತ್ಯ ವಿಶೇಷವೆನಿಸಿತ್ತು.
ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ನೂತನ ವಧು ವರರಿಗೆ ಆಶೀರ್ವಾದ ಮಾಡಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ರಾಜ್ಯ ಸರ್ಕಾರದ ನಾಯಕರು ಹಾಗೂ ಶಾಸಕರು ಭಾಗಿಯಾಗಿದ್ದರು.
ವರ್ಷದಿಂದ ವರ್ಷಕ್ಕೆ ಇಲ್ಲಿ ಮದುವೆಯಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಕಳೆದ ಇಂದು ದಶಕದಿಂದ ಹಲವು ಜೋಡಿಗಳು ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿಡುವ ಮೂಲಕ ಹೊಸ ಜೀವನ ಕಟ್ಟಿಕೊಂಡಿದ್ದಾರೆ.