ಮೈಸೂರು

ಸುತ್ತೂರು ಜಾತ್ರೆಯಲ್ಲಿ ಉಚಿತ ಸಾಮೂಹಿಕ ವಿವಾಹ

ಮೈಸೂರು: ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಇಂದು ನೂರಾರು ಜೋಡಿಗಳು ಶ್ರೀಕ್ಷೇತ್ರ ಸುತ್ತೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅದರಲ್ಲಿ ವಿಶೇಷವಾಗಿ ಅಂದ ಜೋಡಿಗಳು ಎಲ್ಲರ ಗಮನ ಸೆಳೆದಿವೆ.

ಉಚಿತ ಸಾಮೂಹಿಕ ವಿವಾಹದಲ್ಲಿ 150ಕ್ಕೂ ಹೆಚ್ಚು ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಜಾತಿ-ಮತಭೇದವಿಲ್ಲದೇ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಶರ್ಟ್‌ಗಳನ್ನು ನೀಡಲಾಗಿತ್ತು.

ಇದರಲ್ಲಿ ವಿಶೇಷಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಂಡಿದ್ದು ಅಂತ್ಯ ವಿಶೇಷವೆನಿಸಿತ್ತು.

ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ನಾಡಿನ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ನೂತನ ವಧು ವರರಿಗೆ ಆಶೀರ್ವಾದ ಮಾಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿದಂತೆ ರಾಜ್ಯ ಸರ್ಕಾರದ ನಾಯಕರು ಹಾಗೂ ಶಾಸಕರು ಭಾಗಿಯಾಗಿದ್ದರು.

ವರ್ಷದಿಂದ ವರ್ಷಕ್ಕೆ ಇಲ್ಲಿ ಮದುವೆಯಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಕಳೆದ ಇಂದು ದಶಕದಿಂದ ಹಲವು ಜೋಡಿಗಳು ಸಾಮೂಹಿಕ ವಿವಾಹದಲ್ಲಿ ದಾಂಪತ್ಯಕ್ಕೆ ಕಾಲಿಡುವ ಮೂಲಕ ಹೊಸ ಜೀವನ ಕಟ್ಟಿಕೊಂಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago