ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ.
ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು, ಕಾರು ಹಾಗೂ ಆಟೋ ತೀವ್ರವಾಗಿ ಜಖಂಗೊಂಡಿವೆ. ಕಂಬ ಬಿದ್ದ ರಭಸಕ್ಕೆ ಎರಡೂ ವಾಹನಗಳಿಗೆ ಭಾರಿ ಹಾನಿಯಾಗಿದೆ. ಕಾರು ಹಾಗೂ ಆಟೋದಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು, ವಾಹನಗಳಲ್ಲಿದ್ದವರನ್ನು ರಕ್ಷಿಸಿ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಸಂಕಷ್ಟದಲ್ಲಿದ್ದವರಿಗೆ ತಕ್ಷಣ ನೆರವು ದೊರೆತಿದೆ.
ದೀಪಾಲಂಕಾರದ ಕಂಬ ಕುಸಿಯಲು ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …