ಮೈಸೂರು

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ.

ಇಂದು (ಡಿಸೆಂಬರ್ 25) ರಾತ್ರಿ ಅರಮನೆಯ ಜಯ ಮಾರ್ತಾಂಡ ಗೇಟ್ ಮುಂಭಾಗ ಬಲೂನ್​ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಇದರ ತೀವ್ರತೆಗೆ ಸಿಲಿಂಡರ್​ ಛಿದ್ರ ಛೀದ್ರವಾಗಿದೆ. ಸ್ಥಳಕ್ಕೆ ಕೆ.ಆರ್​ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಈ ಸ್ಫೋಟಕ್ಕೆ ಸಾಂಸ್ಕೃತಿಕ ನಗರಿ ಜನ ಬೆಚ್ಚಿಬಿದ್ದಿದ್ದಾರೆ.

ಬ್ಲಾಸ್ಟ್ ತೀವ್ರತೆಗೆ ಇಬ್ಬರ ದೇಹ ಛಿದ್ರ ಛಿದ್ರಗೊಂಡಿದೆ. ಇನ್ನು ಘಟನೆಯಲ್ಲಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಲೂನ್ ಗೆ ಗ್ಯಾಸ್ ತುಂಬುವ ಹಿಲಿಯಂ ಗ್ಯಾಸ್ ಸಿಲಿಂಡರ್ ಸ್ಪೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದು, ಬೆಂಗಳೂರು ಮೂಲದ ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ. ಇನ್ನು ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಂಜುಳಾ, ಕೋಲ್ಕತ್ತಾ ಮೂಲದ ಶಾಹಿನಾ ಶಬ್ಬಿರ್ , ರಾಣೆಬೆನ್ನೂರು ಮೂಲದ ಕೊಟ್ರೇಶ್​ ಎಂಬುವರಿಗೂ ಗಾಯಗಳಾಗಿದ್ದು, ಸದ್ಯ ಇವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

8 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

8 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

8 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

8 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

8 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

9 hours ago