ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದು ಸಿಎಂ ಕ್ಷೇತ್ರದಿಂದ ಮೈಕ್ರೋ ಫೈನಾನ್ಸ್‌ಗಳನ್ನು ತೊಲಗಿಸಬೇಕು ಎಂದು ರೈತ ಸಂಘ ಮತ್ತು ಪ್ರಗತಿಪರ ಸಂಘಟಕರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂಜನಗೂಡಿನ ಸರ್ಕಾರಿ ಆಸ್ಪತ್ರೆಯ ಶವಗಾರದ ಮುಂದೆ ಜಮಾಯಿಸಿ ಧರಣಿ ನಡೆಸಿದ ಸಂಘಟನಕಾರರು ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಹಾಗೂ ದಸಂಸ ಮುಖಂಡರಾದ ಮಲ್ಲಹಳ್ಳಿ ನಾರಾಯಣ, ಕಾರ್ಯ ಬಸವಣ್ಣ, ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಹೆಚ್ಚಾಗಿದೆ. ಇವರ ಕಿರುಕುಳಕ್ಕೆ ಎದರಿ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಒಂದೇ ರಾತ್ರಿ ಅಂಬಳೆ ಮತ್ತು ಮಲ್ಕುಂಡಿ ಗ್ರಾಮಗಳಲ್ಲಿ ಇಬ್ಬರೂ ಬಲಿಯಾಗಿದ್ದಾರೆ. ನಂಜನಗೂಡಿನ ತಹಶಿಲ್ದಾರ್ ಖಡಕ್ ಎಚ್ಚರಿಕೆ ನೀಡಿದರು ಈ ಫೈನಾನ್ಸ್‌ಗಳ ಹಾವಳಿ ಇನ್ನೂ ಹೆಚ್ಚಾಗಿದೆ ಎಂದು ದೂರಿದರು.
ಕೂಡಲೇ ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇವರ ಕಿರುಕುಳದಿಂದ ಜೀವ ಕಳೆದುಕೊಂಡಿರುವ ಕುಟುಂಬಗಳಿಗೆ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಬೃಹತ್ ಮಟ್ಟದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬೆಂಗಳೂರು: ಜಲ ಸಂರಕ್ಷಣೆ ವಿಚಾರವಾಗಿ ರಾಜ್ಯದಲ್ಲಿ ಒಂದು ತಿಂಗಳುಗಳ ಕಾಲ ʼಜಲ ಸಂರಕ್ಷಣಾ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಡಿಸಿಎಂ ಡಿಕೆ…
ಬೆಂಗಳೂರು: ಸರ್ವಜ್ಞ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಕ್ಷೇತ್ರದ ಶಾಸಕರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪರಿಶೀಲನೆ ನಡೆಸಿದರು.…
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಸ್ಥಾಪನೆಯಾಗಿರುವ 7 ವಿಶ್ವವಿದ್ಯಾಲಯಗಳನ್ನು ಮುಚ್ಚುವುದಾಗಿ ನಾವು ಎಲ್ಲಿಯೂ ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾಸಭೆಯಲ್ಲಿ…
ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿತ್ತಿರುವ ತಜ್ಞ ವೈದ್ಯರ ನಿವೃತ್ತಿ ವಯಸ್ಸನ್ನು…
ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆ.ಐ.ಎ.ಸಿ.ಎಲ್) ನಿಬಂಧನೆಗಳನ್ನು ಸಂಪೂರ್ಣವಾಗಿ ಅನುಪಾಲನೆ ಮಾಡಿದಲ್ಲಿ ಸಂಡೂರು, ದೇವದರಿಯಲ್ಲಿ ಗಣಿಗಾರಿಕೆಗೆ ಅನುಮತಿ…
ಪುನೀತ್ ರಾಜಕುಮಾರ್‌ಗೆ 50ನೇ ವರ್ಷದ ಹುಟ್ಟು ಹಬ್ಬ ಹಿನ್ನಲೆ, ಪವರ್‌ಸ್ಟಾರ್ ಎಂಬ ಬಿರುದು ನೀಡಿದ ಮೊದಲ ಸಿನಿಮಾ ʼಅಪ್ಪುʼ ರೀ-ರೀಲಿಸ್…