MDMA case Peddlers arrested three teams formed
ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ ಮಾರಾಟ ಮಾಡುತ್ತಿದ್ದ ಮೂವರು ಹಾಗೂ ಸೇವನೆ ಮಾಡುತ್ತಿದ್ದ 27 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರು ನಗರದಲ್ಲಿ ಕೋಟ್ಯಾಂತ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಲ್ಲದೆ. ತಯಾರಕ ಘಟಕವೂ ಇತ್ತು ಎಂಬ ವಿಚಾರ ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರಿಗೆ ಇರಿಸುಮುರಿಸು ಉಂಟಾಗಿದೆ.
ಹೀಗಾಗಿ ರಾತ್ರೋರಾತ್ರಿ ಕಾರ್ಯಾಚರಣೆಗ ಇಳಿದಿರುವ ಸೀಮಾ ಲಾಟ್ಕರ್ ನಗರದ ವಿವಿದೆಡೆ ಇರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಜರುಗುವ ಚಟುವಟಿಕೆ, ಅದಕ್ಕೆ ಅನುಮತಿ ಪಡೆಯಲಾಗಿದೆಯೇ, ಮಾಲೀಕರು ಯಾರು ಎಂಬ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ.
ಹಾಸ್ಟಲ್‌ಗಳಿಗೆ ಭೇಟಿ: ನಗರದ ವೈದ್ಯಕೀಯ, ಇಂಜಿನಿರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳೇ ಡ್ರಗ್ ಪೆಡ್ಲರ್‌ಗಳಿಗೆ ಟಾರ್ಗೆಟ್ ಎಂಬ ವಿಚಾರ ತಿಳಿದ ಆಯುಕ್ತರು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಕೊಠಡಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ.
ಲಾಡ್ಜ್‌ಗಳ ಪರಿಶೀಲನೆ: ಇದೇ ವೇಳೆ ನಗರದ ಕೆಲ ಲಾಡ್ಜ್‌ಗಳಿಗೂ ಕೂಡ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಹೊರ ರಾಜ್ಯಗಳಿಂದ ಬಂದು ಇಲ್ಲಿ ಉಳಿದುಕೊಳ್ಳುವವರ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಲ್ಲದೆ, ಅಲ್ಲಿನ ಕೊಠಡಿಗಳ ಪರಿಶೀಲನೆ ನಡೆಸಿದ್ದಾರೆ.
ಕುವೆಂಪುನಗರ, ಉದಯಗಿರಿಯಲ್ಲಿ ಪೆಡ್ಲರ್ ಬಂಧನ: ಗಾಂಜ ಮಾರಾಟವನ್ನು ಹತ್ತಿಕ್ಕಲೇಬೇಕು ಎಂದು ನಿರ್ಧರಿಸಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಕುವೆಂಪುನಗರದಲ್ಲಿ ಹಾಗೂ ಉದಯಗಿರಿಯಲ್ಲಿ ಗಾಂಜ ಮಾರಾಟ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಮೂರು ತಂಡಗಳ ರಚನೆ: ಗಾಂಜ ಮಾರಾಟ ಹಾಗೂ ಸೇವನೆ ಮಡುವವರನ್ನು ಹೆಡೆಮುರಿ ಕಟ್ಟಬೇಕು ಎಂಬ ತೀರ್ಮಾನಿಸಿರುವ ಆಯುಕ್ತರು ಖಡಕ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಿದ್ದಾರೆ. ಗಾಂಜ ಮಾರಾಟ ಮಾಡುವ ಹಳೆಯ ಆರೋಪಿಗಳು, ನಗರದ ಹೊರವಲಯದ ಮನೆ, ಹಾಗೂ ಶೆಡ್‌ಗಳನ್ನು ಗಮನಿಸುವುದು ಹಾಗೂ ಹಾಸ್ಟಲ್, ವಸತಿಗೃಹ, ಶೆಡ್‌ಗಳ ಬಗ್ಗೆ ಗಮನಹರಿಸಲು ಮೂರು ತಂಡಗಳನ್ನು ಆಯುಕ್ತರು ರಚಿಸಿದ್ದು, ಅವರುಗಳು ಸೋಮವಾರದಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…