ಮೈಸೂರು

ಎಂಡಿಎಂಎ ಪ್ರಕರಣ | ಪೆಡ್ಲರ್‌ಗಳ ಬಂಧನ, ಮೂರು ತಂಡ ರಚನೆ

ಮೈಸೂರು : ನಗರದ ಎನ್‌ಆರ್ ಮೊಹಲ್ಲಾ ಬಳಿ ಎಂಡಿಎಂಎ ತಯಾರಿಸುತ್ತಿದ್ದ ಶೆಡ್ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರೇ ಸ್ವತಃ ಕಾರ್ಯಾಚರಣೆಗಿಳಿಯುವ ಮೂಲಕ ನಗರದ ಠಾಣಾಧಿಕಾರಿಗಳು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದಾರೆ. ಇದೇ ವೇಳೆ ಗಾಂಜ ಮಾರಾಟ ಮಾಡುತ್ತಿದ್ದ ಮೂವರು ಹಾಗೂ ಸೇವನೆ ಮಾಡುತ್ತಿದ್ದ 27 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ನಗರದಲ್ಲಿ ಕೋಟ್ಯಾಂತ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಲ್ಲದೆ. ತಯಾರಕ ಘಟಕವೂ ಇತ್ತು ಎಂಬ ವಿಚಾರ ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರಿಗೆ ಇರಿಸುಮುರಿಸು ಉಂಟಾಗಿದೆ.

ಹೀಗಾಗಿ ರಾತ್ರೋರಾತ್ರಿ ಕಾರ್ಯಾಚರಣೆಗ ಇಳಿದಿರುವ ಸೀಮಾ ಲಾಟ್ಕರ್‌ ನಗರದ ವಿವಿದೆಡೆ ಇರುವ ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಜರುಗುವ ಚಟುವಟಿಕೆ, ಅದಕ್ಕೆ ಅನುಮತಿ ಪಡೆಯಲಾಗಿದೆಯೇ, ಮಾಲೀಕರು ಯಾರು ಎಂಬ ಬಗ್ಗೆ ಸಂಪೂರ್ಣ ವಿವರಗಳನ್ನು ಪಡೆದುಕೊಂಡಿದ್ದಾರೆ.

ಹಾಸ್ಟಲ್‌ಗಳಿಗೆ ಭೇಟಿ: ನಗರದ ವೈದ್ಯಕೀಯ, ಇಂಜಿನಿರಿಂಗ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳೇ ಡ್ರಗ್ ಪೆಡ್ಲರ್‌ಗಳಿಗೆ ಟಾರ್ಗೆಟ್ ಎಂಬ ವಿಚಾರ ತಿಳಿದ ಆಯುಕ್ತರು ವಿವಿಧ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಕೊಠಡಿಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ.

ಲಾಡ್ಜ್‌ಗಳ ಪರಿಶೀಲನೆ: ಇದೇ ವೇಳೆ ನಗರದ ಕೆಲ ಲಾಡ್ಜ್‌ಗಳಿಗೂ ಕೂಡ ಆಯುಕ್ತರು ಪರಿಶೀಲನೆ ನಡೆಸಿದ್ದಾರೆ. ಹೊರ ರಾಜ್ಯಗಳಿಂದ ಬಂದು ಇಲ್ಲಿ ಉಳಿದುಕೊಳ್ಳುವವರ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಲ್ಲದೆ, ಅಲ್ಲಿನ ಕೊಠಡಿಗಳ ಪರಿಶೀಲನೆ ನಡೆಸಿದ್ದಾರೆ.

ಕುವೆಂಪುನಗರ, ಉದಯಗಿರಿಯಲ್ಲಿ ಪೆಡ್ಲರ್ ಬಂಧನ: ಗಾಂಜ ಮಾರಾಟವನ್ನು ಹತ್ತಿಕ್ಕಲೇಬೇಕು ಎಂದು ನಿರ್ಧರಿಸಿ ಕಾರ್ಯಾಚರಣೆ ನಡೆಸಿರುವ ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಗರದ ಕುವೆಂಪುನಗರದಲ್ಲಿ ಹಾಗೂ ಉದಯಗಿರಿಯಲ್ಲಿ ಗಾಂಜ ಮಾರಾಟ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮೂರು ತಂಡಗಳ ರಚನೆ: ಗಾಂಜ ಮಾರಾಟ ಹಾಗೂ ಸೇವನೆ ಮಡುವವರನ್ನು ಹೆಡೆಮುರಿ ಕಟ್ಟಬೇಕು ಎಂಬ ತೀರ್ಮಾನಿಸಿರುವ ಆಯುಕ್ತರು ಖಡಕ್ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಿದ್ದಾರೆ. ಗಾಂಜ ಮಾರಾಟ ಮಾಡುವ ಹಳೆಯ ಆರೋಪಿಗಳು, ನಗರದ ಹೊರವಲಯದ ಮನೆ, ಹಾಗೂ ಶೆಡ್‌ಗಳನ್ನು ಗಮನಿಸುವುದು ಹಾಗೂ ಹಾಸ್ಟಲ್, ವಸತಿಗೃಹ, ಶೆಡ್‌ಗಳ ಬಗ್ಗೆ ಗಮನಹರಿಸಲು ಮೂರು ತಂಡಗಳನ್ನು ಆಯುಕ್ತರು ರಚಿಸಿದ್ದು, ಅವರುಗಳು ಸೋಮವಾರದಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

16 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

17 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

18 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

18 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

18 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

22 hours ago