Mysore
25
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಎಂಡಿಎಂಎ ಪತ್ತೆಯಾಗಿದೆ ಎನ್ನಲಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ.

ಬಂಧಿತರಿಂದ ಮಾದಕವಸ್ತು ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Tags:
error: Content is protected !!