ಮೈಸೂರು : ನೂತನ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಸೀಮಾ ಲಟ್ಕರ್ ಹಾಗೂ ಮೈಸೂರು ಎಸ್ಪಿ ಆಗಿ ಎನ್ ವಿಷ್ಟುವರ್ಧನ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿ ಒಟ್ಟು ೨೫ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಈ ಹಿಂದೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೀಮಾ ಲಟ್ಕರ್ ಇದೀಗ ರಮೇಶ್ ಬಾನೋತ್ ಅವರ ವರ್ಗಾವಣೆ ಜಾಗಕ್ಕೆ ನೇಮಿಸಿ ಆದೇಶ ಮಾಡಲಾಗಿದೆ. ಸಿ.ಬಿ ರಿಷ್ಯಂತ್ ಅವರನ್ನು ಬೆಂಗಳೂರಿನ ವೈರಲೆಸ್ ಎಸ್ ಪಿ ಜಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಲದೆ ದಕ್ಷಿಣ ಕನ್ನಡದ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅವರನ್ನ ನೇಮಕಮಾಡಲಾಗಿದೆ.
ಕವಿತಾ ಬಿ.ಟಿ ಅವರನ್ನು ಚಾಮರಾಜನಗರ ಜಿಲ್ಲೆಯ ಎಸ್‌ಪಿಯಾಗಿ ನೇಮಿಸಲಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆಯ ಪೊಲೀಸ್ ವರಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ್ ಬಾಲದಂಡಿಯನ್ನು ನೇಮಕ ಮಾಡಲಾಗಿದೆ
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…