Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

ನಿಲ್ಲದ ಮೈಕ್ರೋಫೈನಾನ್ಸ್‌ ಕಿರುಕುಳ: ಮೈಸೂರಿನಲ್ಲಿ ಮತ್ತೊರ್ವ ವ್ಯಕ್ತಿ ಸಾವು

ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮುಂದುವರಿದಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.

ಸುಬ್ರಹ್ಮಣ್ಯ ಅವರು 17 ಫೈನಾನ್ಸ್‌ಗಳಿಂದ ಬರೋಬ್ಬರಿ 10 ಲಕ್ಷ ರೂಪಾಯಿಗೂ ಅಧಿಕ ಸಾಲ ಪಡೆದಿದ್ದರು.

ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಪದೇ ಪದೇ ಮನೆಗೆ ಬಂದು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಸುಬ್ರಹ್ಮಣ್ಯ ಅವರು, ಆತ್ಮಹತ್ಯೆಗೆ ಮುನ್ನ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಗೋಡೆ ಮೇಲೆ ಬರೆದಿದ್ದಾರೆ.

ಈ ಸಂಬಂಧ ಪಿರಿಯಾಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Tags: