ಮೈಸೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮುಂದುವರಿದಿದ್ದು, ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಾಗಿರುವ ಮೈಸೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಬಸವೇಶ್ವರ ಕಾಲೋನಿ ನಿವಾಸಿ ಸುಬ್ರಹ್ಮಣ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ಸುಬ್ರಹ್ಮಣ್ಯ ಅವರು 17 ಫೈನಾನ್ಸ್‌ಗಳಿಂದ ಬರೋಬ್ಬರಿ 10 ಲಕ್ಷ ರೂಪಾಯಿಗೂ ಅಧಿಕ ಸಾಲ ಪಡೆದಿದ್ದರು.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಪದೇ ಪದೇ ಮನೆಗೆ ಬಂದು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಸುಬ್ರಹ್ಮಣ್ಯ ಅವರು, ಆತ್ಮಹತ್ಯೆಗೆ ಮುನ್ನ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಗೋಡೆ ಮೇಲೆ ಬರೆದಿದ್ದಾರೆ.
ಈ ಸಂಬಂಧ ಪಿರಿಯಾಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…