ನಂಜನಗೂಡು: ತಾಲೂಕಿನ ಚಿನ್ನದಹುಂಡಿ ಗ್ರಾಮದಲ್ಲಿ ಮಿಲಿಟರಿ ತರಬೇತಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಲ್ಲಹಳ್ಳಿ ಗ್ರಾಮದ ಪಾಪಣ್ಣನಾಯಕ ಎಂಬುವವರ ಪತ್ನಿ ಮಂಗಳಮ್ಮ ( 35 ) ಮೃತ ಮಹಿಳೆ. ಇನ್ನು 44 ವರ್ಷದ ಪಾಪಣ್ಣನಾಯಕ, 10 ವರ್ಷದ ತೇಜಸ್, 8 ವರ್ಷದ ಲಕ್ಷ್ಮಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಲ್ಲಹಳ್ಳಿ ಗ್ರಾಮದಿಂದ ಪಾಪಣ್ಣನಾಯಕ, ಪತ್ನಿ ಮಂಗಳಮ್ಮ, ಮಕ್ಕಳಾದ ತೇಜಸ್ ಹಾಗೂ ಲಕ್ಷ್ಮಿ ಜತೆಯಾಗಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಚಿನ್ನದಹುಂಡಿ ಬಳಿ ಮಿಲಿಟರಿ ತರಬೇತಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪಾಪಣ್ಣನಾಯ ಹಾಗೂ ಮಕ್ಕಳು ರಸ್ತೆಯ ಎಡಬದಿಗೆ ಬಿದ್ದ ಕಾರಣ ಪ್ರಾಣಪಾಯದಿಂದ ಪಾರಾಗಿದ್ದು, ರಸ್ತೆಯ ಬಲಕ್ಕೆ ಬಿದ್ದ ಮಂಗಳಮ್ಮ ಮೇಲೆ ವಾಹನದ ಹಿಂಬದಿಯ ಚಕ್ರ ಹರಿದು ಸ್ಥಳದಲ್ಲೇ ಮರಣ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಕವಲಂದೆ ಪೊಲೀಸ್ ಠಾಣೆಯ ಎಎಸ್‌ಐ ಶಿವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…