Mysore
25
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಹಾಲು ಕರೆಯುವ ಸ್ಪರ್ಧೆ : ಆನೇಕಲ್‌ ಹಸುವಿಗೆ 1 ಲಕ್ಷ ಬಹುಮಾನ

ಮೈಸೂರು: ದಸರಾ ಅಂಗವಾಗಿ ರೈತ ದಸರಾ ಉಪಸಮಿತಿಯು ಇಲ್ಲಿನ ಜೆ.ಕೆ ಮೈದಾನದಲ್ಲಿ ಇಂದು(ಅ.7) ಏರ್ಪಡಿಸಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್ ತಾಲ್ಲೂಕಿನ ಕಗ್ಗಲೀಪುರದ ತನಿಷ್ ಪಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ 42.84ಲೀ. ಹಾಲು ನೀಡಿ, ಪ್ರಥಮ ಸ್ಥಾನದೊಂದಿಗೆ 1 ಲಕ್ಷ ರೂ ನಗದು ಬಹುಮಾನವನ್ನು ಮಾಲೀಕರಿಗೆ ದೊರಕಿಸಿತು.

ಚನ್ನರಾಯಪಟ್ಟಣ ತಾಲ್ಲೂಕಿನ ತೋಟಿ ಗ್ರಾಮದ ಬಾಬು ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ 42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ 80 ಸಾವಿರ,
ಆನೇಕಲ್ ತಾಲ್ಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್.ಪಿ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ – 41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ 60 ಸಾವಿರ ನಗದು, ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ AGM ಡೈರಿ ಫಾರಂ ದೇವರಾಜ್ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ – 40.580 ಲೀ ಕರೆಯುವ ಮೂಲಕ ನಾಲ್ಕನೇ ಸ್ಥಾನ ಪಡೆದುಕೊಂಡು 40 ಸಾವಿರ ನಗದು ಹಣ ಗಳಿಸಿತು.

ಈ ಸಂದರ್ಭದಲ್ಲಿ ಪ್ರಥಮ, ದ್ವಿತೀಯ, ತೃತೀಯ ಹಾಗೂ ನಾಲ್ಕನೇ ಸ್ಥಾನ ಪಡೆದುಕೊಂಡ ವಿಜೇತರಿಗೆ ನಗದು ಬಹುಮಾನ ಜೊತೆಗೆ ಹಾಲಿನ ಕ್ಯಾನ್, ಟ್ರೋಫಿ, ಪ್ರಶಸ್ತಿ ಪ್ರಮಾಣ ಪತ್ರ ನೀಡಿ ಗೌರವಿಸಿ. ಉಳಿದ ಎಲ್ಲಾ ಸ್ಪರ್ಧಿಗಳಿಗೂ ಹಾಲಿನ ಕ್ಯಾನ್ ನೀಡುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು.

ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ 8 ಹಸುಗಳು ಭಾಗವಹಿಸಿದ್ದು, ಒಟ್ಟು 20 ನಿಮಿಷಗಳ ಕಾಲಾವಕಾಶ ನೀಡಲಾಗಿತ್ತು. ಅದರಲ್ಲಿ ಇಂದು ಬೆಳಿಗ್ಗೆ ಮತ್ತು ಸಂಜೆ ಅಂತಿಮ ಮಟ್ಟದ ಹಾಲು ಕರೆಯುವ ಸ್ಪರ್ಧೆಯನ್ನು ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಹೆಚ್ಚಿನ ಪ್ರಮಾಣದ ಹಾಲನ್ನು ಕರೆದ ಸ್ಪರ್ಧಿಗೆ ಪ್ರಶಸ್ತಿ ನೀಡಲಾಯಿತು.

 

Tags: