ಮೈಸೂರು

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ ; ಸಚಿವ ಬೈರತಿ ಸುರೇಶ್‌

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ಜರುಗಿತು.

ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್‌ ಪುನರ್‌ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ  ಬೈರತಿ ಸುರೇಶ ಅವರು ಸೂಚಿಸಿದರು.

ಮೈಸೂರು ಸುತ್ತ ಮುತ್ತಲಿನ 20 ರಿಂದ 30 ಹಳ್ಳಿಗಳನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡು ಇದಕ್ಕೆ ಸಂಬಂಧಿಸಿದಂತೆ ವಿಸ್ತೃತವಾದ ಯೋಜನಾ ವರದಿಯನ್ನು ಸಿದ್ದಪಡಿಸಿಕೊಂಡು ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲೂ ಸಿದ್ದತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ  ಬೈರತಿ ಸುರೇಶ ಸೂಚಿಸಿದರು.

ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ಜನಸಂಖ್ಯೆ 13.30 ಲಕ್ಷದಷ್ಟಿದ್ದು, ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಂಡರೆ 16.80 ಲಕ್ಷ ಜನಸಂಖ್ಯೆ ಆಗುತ್ತದೆ ಎಂದು ಸಭೆಗೆ ಮೈಸೂರು ಜಿಲ್ಲಾಧಿಕಾರಿಗಳು ತಿಳಿಸಿದಾಗ ಮೈಸೂರಿನಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಕೊರತೆ ಇರುವುದಿಲ್ಲ, ಹೀಗಿರುವಾಗ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನು ರಚಿಸಲು ಯಾವುದೇ ರೀತಿಯ ಅಡೆತಡೆ ಇರುವುದಿಲ್ಲ ಎಂದು ಸಚಿವ ಬೈರತಿ ಸುರೇಶ ಹೇಳಿದರು.

ಈಗಾಗಲೇ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಿರುವ ಕೆಲವು ಪ್ರದೇಶಗಳಿಗೆ ಪಾಲಿಕೆಯ ವತಿಯಿಂದಲೇ ಕುಡಿಯುವ ನೀರಿನ ಸವಲತ್ತನ್ನು ಒದಗಿಸಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹ ಅಭಿವೃದ್ಧಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬೇಡಿಕೆಯು ಹೆಚ್ಚಾಗಿರುತ್ತದೆ. ಅದರಂತೆ ಸೇವೆ ಪಾಲಿಕೆಯಿಂದ ವಿಸ್ತರಿಸಬೇಕಾಗಿದೆ ಎಂದು ಅಧಿಕಾರಿಗಳ ಸಭೆಗೆ ತಿಳಿಸಿದರು.

ಮೈಸೂರು ಸುತ್ತ ಮುತ್ತಲಿನ ಗ್ರಾಮಗಳ/ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ಆಡಳಿತ ವ್ಯಾಪ್ತಿಗೆ ಒಳಪಡಿಸಿ ಎಂದು ಸಚಿವರಾದ ಬೈರತಿ ಸುರೇಶ ಸೂಚಿಸಿದರು.

ಮೈಸೂರು ಮಹಾನಗರ ಪಾಲಿಕೆ, ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಕಡಕೋಳ ಮತ್ತು ಬೋಗಾದಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿಯ ಇಲವಾಲ ಗ್ರಾಮ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ನಾಗನಹಳ್ಳಿ ಗ್ರಾಮ ಪಂಚಾಯಿತಿಯ ಶ್ಯಾದನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆಯ ಸರಹದ್ದಿಗೆ ಹೊಂದಿಕೊಂಡಿದೆ.

ಇವುಗಳಲ್ಲಿ ಕೆಲ ಸ್ಥಳೀಯ ಸಂಸ್ಥೆಯ ಕೌನ್ಸಿಲ್‌ ಸಭೆಯಲ್ಲಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸುವ ಪ್ರಸ್ತಾವನೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿರುತ್ತಾರೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಬಾಕಿ ಉಳಿದ ಸ್ಥಳೀಯ ಸಂಸ್ಥೆಯ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾವನೆಯನ್ನು ಇರಿಸಿ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಅದಷ್ಟು ಬೇಗ ಮೇಲ್ದರ್ಜೆಗೇರಿಸಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬೈರತಿ ಸುರೇಶ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳಾನ್‌, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶರತ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ|| ಸೆಲ್ವಮಣಿ ಆರ್, ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತ ವೆಂಕಟಾಚಲಪತಿ ಆರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ತನ್ವೀರ್‌ ಶೇಖ್‌, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಘುನಂದನ್‌, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರಾದ ಎನ್.‌ ಕೆ. ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

8 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

9 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

9 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

10 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

11 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

11 hours ago