ಮೈಸೂರು

ಪಂಡಿತ್ ರಾಜೀವ್ ಅವರ ಆರೋಗ್ಯ ವಿಚಾರಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು: ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿರುವ  ಪದ್ಮಶ್ರೀ ರಾಜೀವ್‌ ತಾರಾನಾಥ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ಇಂದು(ಮೇ.26) ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಆಸ್ಪತ್ರೆಗೆ ದಾಖಲಾಗಿರುವ ತಾರಾನಾಥ್ ಅವರ ಆರೋಗ್ಯದ ಸ್ಥಿತಿ ಗತಿ ಕುರಿತು ಸಚಿವರು ವೈದ್ಯ ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರ ಜೊತೆ ಚರ್ಚಿಸಿದರು. ಈ ವೇಳೆ ಸರ್ಕಾರದ ನೆರವು ದೊರಕಿಸಿಕೊಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಮೈಸೂರು ಜಿಲ್ಲಾ ಕಾಂಗ್ರೆಸ್ ಸಾಂಸ್ಕೃತಿಕ ಸಮಿತಿ ಅಧ್ಯಕ್ಷೆ ಡಾ.ಶ್ವೇತಾ ಮಡಪ್ಪಾಡಿ ಅವರು ಈ ಸಂದರ್ಭದಲ್ಲಿ ಸಚಿವರ ಜೊತೆ ಉಪಸ್ಥಿತರಿದ್ದರು.

ಸರೋದ್‌ ವಾದಕ್‌ ಪಂಡಿತ್‌ ರಾಜೀವ್‌ ತಾರಾನಾಥ್ ಅವರ ಹಿನ್ನೆಲೆ;
ತಾರಾನಾಥ್ ಅವರು ಸಂಗೀತ ಲೋಕದಲ್ಲಷ್ಟೇ ಅಲ್ಲದೆ, ಇಂಗ್ಲೀಷ್ ಪ್ರಾಧ್ಯಾಪಕರಾಗಿ, ಅನುವಾದಕರಾಗಿ ಸಾಹಿತ್ಯ ಕ್ಷೇತ್ರದಲ್ಲೂ ಸಾಕಷ್ಟು ಕೆಲಸ ಮಾಡಿದ್ದು, ಇವರ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ ೧೯೯೮ (ಕರ್ನಾಟಕ ಸರಕಾರ, ಭಾರತ), ಸಂಗೀತ ನೃತ್ಯ ಅಕ್ಯಾಡೆಮಿ ಪ್ರಶಸ್ತಿ, ೧೯೯೩,ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ೧೯೯೬, ಕೆಂಪೇಗೌಡ ಪ್ರಶಸ್ತಿ, ೨೦೦೬, ಗಾಯನ ಸಮಾಜದಿಂದ ಸಂಗೀತ ಕಲಾರತ್ನ, ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ, ಭ್ರಮರಾಂಬಾ ಎನ್ ನಾಗರಾಜ್ ಬಂಗಾರದ ಪದಕ, ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪ್ರಶಸ್ತಿ ಅಲ್ಲದೇ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯೂ ಲಭಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

14 mins ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

38 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

1 hour ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

3 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

3 hours ago