ಮೈಸೂರು

ಹನಿಟ್ರ್ಯಾಪ್‌ ವಿರುದ್ಧ ಹೊಸ ಕಾಯ್ದೆ ಬರಲಿ : ಸಚಿವ ʻಎಚ್‌ಸಿಎಂʻ ಆಗ್ರಹ

ಮೈಸೂರು: ಹನಿಟ್ರ್ಯಾಪ್‌ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆಗ್ರಹಿಸಿದರು.

ರಾಜ್ಯದಲ್ಲಿ ಸಚಿವರ ಹನಿಟ್ರ್ಯಾಪ್‌ ವಿಚಾರ ಕುರಿತು ಶನಿವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಎಂಬುದು ಪಿತೂರಿ. ಈ ಹಿಂದಿನಿಂದಲೂ ಇದು ನಡೆಯುತ್ತಾ ಬಂದಿದೆ. ಇದಕ್ಕೆ ಸಂಬಂಧಿಸಿದ ಕಾಯ್ದೆ ತರಬೇಕು. ದುರುದ್ದೇಶದ ಈ ಪಿತೂರಿ ಮಾಡುವ ಗುಂಪುಗಳನ್ನು ಮಟ್ಟ ಹಾಕಬೇಕು. ಖಾಸಗಿತನದ ಗೌಪ್ಯತೆ ಧಕ್ಕೆ ತರುತ್ತಿದ್ದಾರೆ. ಇಂತಹ ಕೆಲಸ ಮಾಡುವವರಿಗೆ ಉಗ್ರ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೊಸ ಕಾಯ್ದೆ ತರಬೇಕು ಎಂದು ಒತ್ತಾಯಿಸಿದರು.

ಹನಿಟ್ರ್ಯಾಪ್‌ ಸ್ವಪಕ್ಷದವರೇ ಮಾಡಿದ್ದಾರೆ ಎಂದು ಸಚಿವ ರಾಜಣ್ಣ ಯಾರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಗೊತ್ತಿಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲಿ. ತನಿಖೆಯಲ್ಲಿ ಮಾತ್ರ ಯಾರು ಮಾಡಿದರು, ಏನು ಮಾಡಿದರು ಎಂಬುದು ಗೊತ್ತಾಗುತ್ತದೆ. ಯಾರಾದರೂ ಸರಿ ಸತ್ಯ ಹೊರಗಡೆ ಬರಲಿ. ಸುಮ್ಮನೆ ಅವರು, ಇವರು ಅನ್ನೋದು ಸರಿಯಲ್ಲ. ಯಾರೇ ಮಾಡಿದರೂ ಕ್ರಮ ತೆಗೆದುಕೊಳ್ಳಲಿ. ಸುಮ್ಮನೆ ಊಹಾಪೋಹದ ಮಾತು ಬೇಡ ಎಂದು ಹೇಳಿದರು.

ನಾನು ಎಲ್ಲರಿಗೂ ಹಲೋ ಎನ್ನುತ್ತೇನೆ. ಎಲ್ಲರೂ ನನಗೆ ಪ್ರತಿಕ್ರಿಯೆ ಕೊಡುತ್ತಾರೆ. ಅದರಿಂದಲೇ ಹನಿಟ್ರ್ಯಾಪ್‌ ಅನ್ನೋದು ಹೇಗೆ. ನನಗೆ ಅಂತಹ ಯಾವ ವಿಚಾರಗಳು ಗೊತ್ತಾಗುವುದಿಲ್ಲ. ನನ್ನನ್ನು ತುಳಿಯುವ ಪ್ರಯತ್ನ ಯಾರು ಮಾಡುತ್ತಾರೋ, ಮಾಡಿದಾರೋ ಅದು ನನಗೆ ಗೊತ್ತಿಲ್ಲ. ಆದರೆ ನಾನಂತೂ ಸದೃಢವಾಗಿ ಕುಳಿತ್ತಿದ್ದೇನೆ. ಹನಿಟ್ರ್ಯಾಪ್‌ ವಿಚಾರದಲ್ಲಿ ರಾಜಣ್ಣ ಜೊತೆ ಪ್ರತ್ಯೇಕ ಸಭೆ ನಡೆಸುವ ಅಗತ್ಯವೇನು ಇಲ್ಲ. ಏಕಂದರೆ ಈ ವಿಚಾರ ಈಗಾಗಲೇ ತೀರ್ಮಾನ ಆಗಿದೆ. ಉನ್ನತ ಮಟ್ಟದ ತನಿಖೆ ನಡೆಯಲಿ ಎಂದು ಹೇಳಿದರು.

ಹಲೋ ಅಂತ ಇಲ್ಲಿ ಹೇಳಿದ್ರೆ, ಅಲ್ಲೂ ಹಲೋ ಅಂತಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ . ಸಿಎಂ ಸಿದ್ದರಾಮಯ್ಯ ಪರ ಇದ್ದೋರನ್ನ ಟಾರ್ಗೆಟ್ ಮಾಡ್ತಿದ್ದಾರೆಯೇ ಎಂದು ನನಗೆ ಅನಿಸಲ್ಲ. ಆದರೆ ಮಾಡುತ್ತಿರಬಹುದು. ನಾನು ಕೂಡ ಸಿಕ್ಕ ಸಿಕ್ಕವರಿಗೇ ಹಾಯ್, ಹಲೋ ಹೇಳಿದ್ದೀನಿ ಎಂದರು.

ನಾನು ನನ್ನ ರಾಜಕೀಯ ಇತಿಹಾಸದಲ್ಲಿ ಈ ರೀತಿ ಹನಿಟ್ರ್ಯಾಪ್‌ಗಳನ್ನ ನೋಡಿಲ್ಲ. ರಾಜ್ಯದ ರಾಜಕೀಯ ನೈತಿಕ ಅಧಃಪತನದತ್ತ ತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿ.26ರಿಂದ ಕೊಡವ ಹಾಕಿ ಚಾಂಪಿಯನ್ ಟ್ರೋಫಿ

ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…

2 hours ago

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

2 hours ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

3 hours ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

3 hours ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

13 hours ago