Categories: ಮೈಸೂರು

ಕೆ.ಆರ್.ನಗರ ಮಲೆ ಮಹದೇಶ್ವರ ಸ್ವಾಮಿ ಉತ್ಸವದಲ್ಲಿ ಸಚಿವ ಈಶ್ವರಖಂಡ್ರೆ ಭಾಗಿ

ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ತೀಕ ಮಾಸ ಬೆಳಕಿನ ಹಬ್ಬ, ನಮ್ಮೆಲ್ಲರಲ್ಲೂ ಇರುವ ಅಜ್ಞಾನವೆಂಬ ಅಂಧಕಾರವನ್ನು ತೊಡದುಹಾಕಿ, ಸುಜ್ಞಾನವೆಂಬ ಬೆಳಕನ್ನು ಹಚ್ಚುವ ಮಾಸ ಕಾರ್ತೀಕ. ಈ ಮಾಸದಲ್ಲಿ ವಿವಿಧ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ, ಅರ್ಚನೆ, ಲಕ್ಷ ದೀಪೋತ್ಸವ ಮತ್ತು ಉತ್ಸವಗಳು ನಡೆಯುತ್ತವೆ. ಧಾರ್ಮಿಕ ವಿಚಾರಗಳ ವಿನಿಮಯ ಆಗುತ್ತದೆ. ಸಹಬಾಳ್ವೆಯ ಮಹತ್ವ ಸಾರುತ್ತವೆ ಎಂದು ಹೇಳಿದರು.

ಮಲೆ ಮಹದೇಶ್ವರ ಸ್ವಾಮಿಯವರು ಜನಪದರ ದೇವರು, ಅವರು ಹುಲಿಯ ಮೇಲೆ ಸಂಚಾರ ಮಾಡುತ್ತಿದ್ದರು. ಆದರೆ ಅವರ ಮನಸ್ಸು ಮಲ್ಲಿಗೆಯಷ್ಟೇ ಮೃದುವಾಗಿತ್ತು. ಹೀಗಾಗಿಯೇ ಅವರು ಮಲ್ಲಿಗೆ ಮಾದಪ್ಪನಾಗಿ ಜನರ ಹೃದಯದಲ್ಲಿ ನೆಲೆಸಿದ್ದಾರೆ ಎಂದರು.

15ನೇ ಶತಮಾನದಲ್ಲಿ ಜನರ ಸಂಕಷ್ಟಗಳನ್ನು ತಮ್ಮ ಅಲೌಕಿಕಶಕ್ತಿಯಿಂದ ಪರಿಹರಿಸಲು ಅವತರಿಸಿದ ದೈವಾಂಶ ಸಂಭೂತರಾದ ಮಹದೇಶ್ವರಸ್ವಾಮಿಯವರು ಬೆಟ್ಟದ ಸರಣಿಯ ರಮಣೀಯತೆಗೆ ಮನಸೋತು ಮಹದೇಶ್ವರ ಬೆಟ್ಟದಲ್ಲಿಯೇ ನೆಲೆಸಿದರು. ಸುದೀರ್ಘ ತಪಸ್ಸು ಮಾಡಿ ಸಿದ್ಧಿಯನ್ನು ಪಡೆದರು.

ಇಂದಿಗೂ ತಮ್ಮ ತಪಃಶಕ್ತಿಯನ್ನು ಜನರ ಕಲ್ಯಾಣ ಮಾಡುತ್ತಿದ್ದಾರೆ. ತಮ್ಮ ಅಲೌಕಿಕ ಶಕ್ತಿಯನ್ನು ಸಮಾಜದ ಅದರಲ್ಲೂ ದೀನ ದಲಿತರ, ಶೋಷಿತರನ್ನು ಹರಸುತ್ತಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ರವಿಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

7 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

9 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

9 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

9 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

9 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

9 hours ago