Mysore
20
overcast clouds
Light
Dark

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ : ಕಂದಾಯ ಸಚಿವ ಕೃಷ್ಣ ಬೈರೇಗೌಡರಿಂದ ಪ್ರಗತಿ ಪರಿಶೀಲನಾ ಸಭೆ

ಮೈಸೂರು : .  ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿರುವ ಹಿನ್ನೆಲೆ ಮೈಸೂರು – ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು  ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ  ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ ಮಾಡಿದರು.

ಬಳಿಕ ಮಾತನಾಡಿದ ಸಚಿವರು, ಮಳೆಯಿಂದಾಗಿ ಜನಸಾಮಾನ್ಯರ ಆಸ್ತಿ, ಪ್ರಾಣಕ್ಕೆ ತೊಂದರೆಯಾಗದಂತೆ ಕ್ರಮವಹಿಸಲು ಅಧಿಕಾರಿಗಳ ಸಭೆ ಕರೆದಿದ್ದೇವೆ. ಜೊತೆಗೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವ ಹಿನ್ನೆಲೆ ೯ ಜಿಲ್ಲೆಯ ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ ಗಳ ಜೊತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ಮಾಡುತ್ತಿದ್ದೇವೆ. ಮಳೆಯಿಂದ ಯಾವುದೇ ಹಾನಿಯಾಗದ ರೀತಿಯಲ್ಲಿ ಕ್ರಮವಹಿಸಲು ಸಿದ್ದರಾಗುತ್ತಿದ್ದೇವೆ ಎಂದರು.

ರಾಜ್ಯದಲ್ಲಿ ಈಗ ಸಮೃದ್ಧಿಯಾದ ಮಳೆಯಾಗಿರುವುದರಿಂದ ಇದುವರೆಗೂ ಒಟ್ಟು 20 ಜನ ಮೃತಪಟ್ಟಿದ್ದಾರೆ. ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದೆ. ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮುಂದೆ ಮಳೆ ಹೆಚ್ಚಾಗಿ ನಷ್ಟ ಹೆಚ್ಚಾದರೆ ಪರಿಹಾರ ಕೇಳ್ತಿವಿ ಎಂದು ಹೇಳಿದರು.

ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಮಂಗಳೂರು, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.