ಮೈಸೂರು : . ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿರುವ ಹಿನ್ನೆಲೆ ಮೈಸೂರು – ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ ಮಾಡಿದರು.
ಬಳಿಕ ಮಾತನಾಡಿದ ಸಚಿವರು, ಮಳೆಯಿಂದಾಗಿ ಜನಸಾಮಾನ್ಯರ ಆಸ್ತಿ, ಪ್ರಾಣಕ್ಕೆ ತೊಂದರೆಯಾಗದಂತೆ ಕ್ರಮವಹಿಸಲು ಅಧಿಕಾರಿಗಳ ಸಭೆ ಕರೆದಿದ್ದೇವೆ. ಜೊತೆಗೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವ ಹಿನ್ನೆಲೆ ೯ ಜಿಲ್ಲೆಯ ಜಿಲ್ಲಾಧಿಕಾರಿಗಳು, ತಹಸೀಲ್ದಾರ್ ಗಳ ಜೊತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ಮಾಡುತ್ತಿದ್ದೇವೆ. ಮಳೆಯಿಂದ ಯಾವುದೇ ಹಾನಿಯಾಗದ ರೀತಿಯಲ್ಲಿ ಕ್ರಮವಹಿಸಲು ಸಿದ್ದರಾಗುತ್ತಿದ್ದೇವೆ ಎಂದರು.
ರಾಜ್ಯದಲ್ಲಿ ಈಗ ಸಮೃದ್ಧಿಯಾದ ಮಳೆಯಾಗಿರುವುದರಿಂದ ಇದುವರೆಗೂ ಒಟ್ಟು 20 ಜನ ಮೃತಪಟ್ಟಿದ್ದಾರೆ. ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದೆ. ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮುಂದೆ ಮಳೆ ಹೆಚ್ಚಾಗಿ ನಷ್ಟ ಹೆಚ್ಚಾದರೆ ಪರಿಹಾರ ಕೇಳ್ತಿವಿ ಎಂದು ಹೇಳಿದರು.
ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಮಂಗಳೂರು, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…