ಮೈಸೂರು

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಮಹದೇವಪ್ಪ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭಾನುವಾರ ಸಾರ್ವಜನಿಕರಿಂದ ಅಹವಾಲುಗಳನ್ನು ಆಲಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಮಧ್ಯಾಹ್ನದಿಂದ ಸಂಜೆ ತನಕ ನೂರಾರು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಕೇಳಿದರು. ಎಚ್.ಡಿ.ಕೋಟೆ ತಾಲ್ಲೂಕಿನ ಬೇಲದಕುಪ್ಪೆ ಜಾತ್ರಾ ಮಹೋತ್ಸವ ಸಮಿತಿ ಪದಾಧಿಕಾರಿಗಳು ಆಗಮಿಸಿ ಜಾತ್ರೆಗೆ ಆಗಮಿಸುವಂತೆ ಮನವಿ ಸಲ್ಲಿಸುವ ಜತೆಗೆ, ಹಲವಾರು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು. ಕಂಚುಮಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಕಾಮಗಾರಿಗೆ 50 ಲಕ್ಷ ರೂಪಾಯಿ ನೀಡಿದ್ದು,ಕಾಮಗಾರಿ ಪೂರ್ಣವಾಗಿಲ್ಲ. ಹಾಗಾಗಿ,ಹೆಚ್ಚುವರಿ ಅನುದಾನ ನೀಡುವಂತೆ ಕೋರಿದರು. ಇದಕ್ಕೆ ಸ್ಪಂದಿಸಿದ ಸಚಿವರು ಮುಂದಿನ ದಿನಗಳಲ್ಲಿ ಭವನ ನಿರ್ಮಾಣಕ್ಕೆ ಆಗುವ ಅಂದಾಜು ಪಟ್ಟಿಯನ್ನು ತಯಾರಿಸಿ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಎಚ್.ಡಿ.ಕೋಟೆಯ ಜೀತ ವಿಮುಕ್ತ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಸಚಿವರಿಗೆ ಕಾರ್ಮಿಕರ ಸಮಸ್ಯೆಗಳನ್ನು ವಿವರಿಸಿದರು. ತಾಲ್ಲೂಕಿನಲ್ಲಿರುವ ಕಾರ್ಮಿಕರು, ಸರ್ಕಾರದಿಂದ ಸಿಗಬೇಕಾದ ಸೌಲಭ್ಯ, ಜಮೀನು ಮಂಜೂರಾತಿಯಲ್ಲಿ ವಿಳಂಬ ಸೇರಿದಂತೆ ಮತ್ತಿತರ ಅಂಶಗಳನ್ನು ಹೇಳಿದರು.

ಇದನ್ನು ಪರಿಗಣಿಸಿದ ಡಾ.ಮಹದೇವಪ್ಪ,ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು. ನಂಜನಗೂಡು ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶರಾಜು ನೇತೃತ್ವದ ತಂಡ ಆಗಮಿಸಿ ಸಚಿವರೊಂದಿಗೆ ನಾನಾ ವಿಚಾರಗಳನ್ನು ಚರ್ಚಿಸಿದರಲ್ಲದೆ, ಖಾಸಗಿ ಟ್ರಸ್ಟ್‌ಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್.ಸಿದ್ಧಾರ್ಥ ಅವರು ಸೋಸಲೆ ಭಾಗಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಚರ್ಚಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಿಕ್ಕಬಳ್ಳಾಪುರ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರೊಬ್ಬರು ಪೋಷಕರ ಅನಾರೋಗ್ಯದ ಕಾರಣಕ್ಕಾಗಿ ಮೈಸೂರು ಜಿಲ್ಲೆಗೆ ವರ್ಗಾಯಿಸುವಂತೆ ಮನವಿ ಮಾಡಿದರು. ಈ ಬಗ್ಗೆ ದೂರವಾಣಿ ಮೂಲಕ ಕೆಎಸ್‌ಆರ್‌ಟಿಸಿ ಎಂಡಿ ಜತೆಗೆ ಚರ್ಚಿಸಿದ ಸಚಿವರು,ಮಾನವೀಯತೆ ಆಧಾರದ ಮೇಲೆ ನೌಕರನ ಅರ್ಜಿಯನ್ನು ಪರಿಗಣಿಸಿ ವರ್ಗಾಯಿಸುವಂತೆ ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಹೂರೂಪಿ | ಜಾನಪದ ಉತ್ಸವಕ್ಕೆ ಚಾಲನೆ

ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…

4 hours ago

ಸಂಗ್ರಹಾಲಯವಾಗಿ ಕುವೆಂಪು ಅವರ ಉದಯರವಿ ಮನೆ

ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…

5 hours ago

ಮ.ಬೆಟ್ಟ ಮಾರ್ಗದಲ್ಲಿ ಚಿರತೆ ಪ್ರತ್ಯಕ್ಷ : ಎಚ್ಚರಿಕೆಯ ಸಂಚಾರಕ್ಕೆ ಕೋರಿಕೆ

ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…

5 hours ago

ದ್ವೇಷ ಮರೆಯಿರಿ, ಪ್ರೀತಿ ಗಳಿಸಿ : ಡಿ.ಆರ್.ಪಾಟೀಲ್ ಕರೆ

ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…

5 hours ago

ಡ್ಯಾಡ್ ಈಸ್‌ ಹೋಂ | ಎಚ್‌ಡಿಕೆ ಎಂಟ್ರಿಗೆ ಡಿಕೆಶಿ, ಸಿದ್ದು ಶಾಕ್‌ ; ಸಂಚಲನ ಮೂಡಿಸುತ್ತಿರುವ AI ವಿಡಿಯೋ

ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…

5 hours ago

ಸೋಮನಾಥದಲ್ಲಿ ಶೌರ್ಯ ಯಾತ್ರೆ

ಸೋಮನಾಥ : ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…

5 hours ago