Mysore
14
overcast clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು: ಕೆಆರ್‌ಎಸ್‌ನಿಂದ ಸುಮಾರು 2 ಕಿ. ಮೀ. ಮೇಲ್ಭಾಗದಲ್ಲಿ ಹಳೇ ಉಂಡವಾಡಿ ಗ್ರಾಮದ ಬಳಿ ಇರುವ ಹಿನ್ನೀರು ಪ್ರದೇಶದಲ್ಲಿ ಮೈಸೂರಿಗೆ ಶಾಶ್ವತವಾಗಿ ನೀರು ಪೂರೈಸುವ ಸ್ಥಾವರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಆರ್‌ಎಸ್ ಅಣೆಕಟ್ಟಿನ ಹಿನ್ನೀರು ಪ್ರದೇಶದಿಂದ ನೇರವಾಗಿ ಮೈಸೂರು ಹಾಗೂ 92 ಗ್ರಾಮಗಳಿಗೆ ನೀರು ಪೂರೈಸುವ ಉಂಡುವಾಡಿ ನೀರಾವರಿ ಯೋಜನೆ ಇದಾಗಿದೆ.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ.ದೇವೆಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯುಬ್ ಖಾನ್, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಶೇಕ್ ತನ್ವಿರ್ ಆಸಿಫ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!