Mysore
23
scattered clouds

Social Media

ಶುಕ್ರವಾರ, 11 ಜುಲೈ 2025
Light
Dark

ಸಣ್ಣಪುಟ್ಟ ವ್ಯತ್ಯಾಸ ಬದಿಗಿರಿಸಿ ಹೆಚ್ಚಿನ ಸ್ಥಾನ ಗೆಲ್ಲಬೇಕಿದೆ : ಯದುವೀರ್

CM Siddaramaiah's behavior towards the police officer was not appropriate

ಮೈಸೂರು : ನರೇಂದ್ರ ಮೋದಿ ಅವರ ಹನ್ನೊಂದು ವರ್ಷದ ಸಾಧನೆಯನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ರಾಜ್ಯವನ್ನು ಉಳಿಸುವ ದಿಕ್ಕಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ರಾಮಾನುಜ ರಸ್ತೆಯಲ್ಲಿನ ರಾಜೇಂದ್ರ ಕಲಾಮಂದಿರದಲ್ಲಿ ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿಕಸಿತ ಭಾರತದ ಅಮೃತಕಾಲ ಸೇವೆ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ ೧೧ ವರ್ಷ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಸಮಾವೇಶವದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಭ್ರಷ್ಟಾಚಾರ, ದುರಾಡಳಿತವನ್ನು ನೋಡುವಂತಾಗಿದೆ. ವಾಲ್ಮೀಕಿ, ಮುಡಾ ಹಗರಣದಲ್ಲಿ ಸಿಲುಕಿ ಕಪ್ತ್ಯ್ಪುಚುಕ್ಕೆ ಹೊಂದಿದ ಸರ್ಕಾರವಾಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

ಜನಪರವಾಗಿ ಒಗ್ಗಟ್ಟನ್ನು ಪ್ರದರ್ಶಿಸಿ ಕೆಲಸ ಮಾಡಿದರೆ ಜನರಿಂದ ಬೆಂಬಲ ದೊರೆಯಲಿದೆ. ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೇರವಾಗಿ ಸೇರುವಂತೆ ಮಾಡಿ ಸೋರಿಕೆಯನ್ನು ತಡೆಗಟ್ಟಿದ್ದಾರೆ. ಕರ್ನಾಟಕದ ಮಟ್ಟಿಗೆ ನಾವು ಗಟ್ಟಿ ನಿರ್ಧಾರ ಮಾಡುವ ಅಮೃತಗಳಿಗೆ ಬಂದಿದೆ. ಸ್ಥಳೀಯ ಶಾಸಕರು ಬಿಟ್ಟರೆ ಮತ್ತೊಂದು ಶಾಸಕರನ್ನು ಹುಡುಕಲು ಸಾಧ್ಯವಿಲ್ಲ. ನಾಲ್ಕು ಜಿಲ್ಲೆಗಳ ೨೮ ಕ್ಷೇತ್ರದಲ್ಲಿ ಹೆಚ್ಚು ಸ್ಥಾನವನ್ನು ಗೆಲ್ಲಬೇಕು.ನಮ್ಮಲ್ಲಿ ಇರುವ ಸಣ್ಣಪುಟ್ಟ ವ್ಯತ್ಯಾಸ, ಸಮಸ್ಯೆಗಳನ್ನು ಬದಿಗೊತ್ತಿ ಕೆಲಸ ಮಾಡಿದರೆ ಸಾಕು. ಮಧ್ಯಂತರ ಚುನಾವಣೆ ಬಂದರೂ ಅಚ್ಚರಿ ಇಲ್ಲ.ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಗಮನಿಸಿದರೆ ಅಂತಹ ವಾತಾವರಣ ಕಾಣಿಸುತ್ತದೆ ಎಂದು ಹೇಳಿದರು.

Tags:
error: Content is protected !!