ನಂಜನಗೂಡು: ಪಾಗಲ್ ಪ್ರೇಮಿಯೋರ್ವ ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಯ ಬೆನ್ನು ಬಿದ್ದ ಪರಿಣಾಮ ಮನನೊಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನಂಜನಗೂಡಿನ ನೀಲಕಂಠ ನಗರದ ದಿವ್ಯಾ ಎಂದು ಗುರುತಿಸಲಾಗಿದೆ. ದಿವ್ಯಾಳಿಗೆ ಆದಿತ್ಯ ಎಂಬಾತ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಇದರಿಂದ ಬಾಲಕಿ ತೀವ್ರವಾಗಿ ನೊಂದಿದ್ದಳು.
ಈ ಬಗ್ಗೆ ಪೋಷಕರಿಗೂ ದಿವ್ಯಾ ವಿಷಯ ತಿಳಿಸಿದ್ದಳು. ಪೋಷಕರು ಆದಿತ್ಯನನ್ನು ಕರೆಸಿ ಬುದ್ದಿವಾದ ಹೇಳಿ ಕಳುಹಿಸಿಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಆದಿತ್ಯ ಮತ್ತೆ ಮತ್ತೆ ದಿವ್ಯಾಗೆ ಕಿರುಕುಳ ನೀಡುತ್ತಿದ್ದ.
ಇದರಿಂದ ಮನನೊಂದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯ ಪೋಷಕರು ನಂಜನಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…