ಕಿಡಿಗೇಡಿಗಳ ಕುಕೃತ್ಯಕ್ಕೆ ರೈತ ಕಂಗಾಲು
ಎಚ್.ಡಿ.ಕೋಟೆ`: ತಾಲೂಕಿನ ಮಾದಾಪುರ ಗ್ರಾಮದ ಜಮೀನಿನಲ್ಲಿರಿಸಿದ್ದ ರಾಗಿ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಎಕರೆ ಇಪ್ಪತೆರಡು ಗುಂಟೆ ಜಮೀನನಲ್ಲಿದ್ದ ಬಣವೆಗಳು ಬೆಂಕಿ ಗಾಹುತಿಯಾಗಿವೆ.
ರೈತ ಮಲ್ಲನಾಯಕ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ರಾಗಿ ಬಣವೆಗಳನ್ನು ಇಟ್ಟಿದ್ದರು. ಗುರುವಾರ ಬೆಳಗ್ಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ರೈತ ಕಂಗಾಲಾಗಿದ್ದಾರೆ. ದುರ್ಘಟನೆಯ ಮಾಹಿತಿಯನ್ನು ರೈತ ತಾಲೂಕಿನ ಅಗ್ನಿ ಶಾಮಕ ದಳದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕಾಗಿಮಿಸುವಷ್ಟರಲ್ಲಿ ಬಣವೆಗಳು ಸಂಪೂರ್ಣ ಬೆಂಕಿಗಾ ಹುತಿಯಾಗಿದ್ದವು.
ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ದುರ್ಘಟನೆಯನ್ನು ಕಂಡ ಅಕ್ಕ-ಪಕ್ಕದ ಗ್ರಾಮಸ್ಥರ ರೈತರು ಮರುಗಿದರು.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…