ಮೈಸೂರು : ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಮೀಸಲು ಹಣವನ್ನು ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಪಂಚ ಗ್ಯಾರಂಟಿಗಾಗಿ ಅಕ್ರಮವಾಗಿ ಬಳಸಿಕೊಳ್ಳುತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ದಲಿತ ಮಹಾಸಭಾ ರಾಜ್ಯ ಸಂಚಾಲಕ ಎಸ್.ಸುಂದರ್ ಹಣಕೊಳ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳು ಯಾವುದೇ ಸಮುದಾಯಕ್ಕೆ, ಜಾತಿಗೆ ಸೇರಿದವಲ್ಲ. ಕಾಂಗ್ರೆಸ್ ಸರ್ಕಾರ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಮೀಸಲು ಹಣವನ್ನು, ಆರ್ಥಿಕ ಮುಗ್ಗಟ್ಟು ಎದುರಾಗಿ ಪಂಚ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ. ಇದು ಡಾ.ಬಿ.ಆರ್. ಅಂಬೇಡ್ಕರ್ ನೀಡಿರುವ ಮೀಸಲಾತಿಯನ್ನೇ ಬುಡಮೇಲು ಮಾಡಿದೆ. ಸೆಕ್ಷನ್ 7ಡಿ ದುರುಪಯೋಗವಾಗುತ್ತಿದೆ ಎಂದು ರದ್ದು ಮಾಡಿ, ಸೆಕ್ಷನ್ 7ಸಿ ಉಳಿಸಿಕೊಂಡರೆ ಅದರ ಮುಖೇನ ಪರಿಶಿಷ್ಟರ ಮೀಸಲು ಹಣವನ್ನು, ಅದಕ್ಕಿಂತಲೂ ಹೆಚ್ಚು ದುರುಪಯೋಗವಾಗುತ್ತಿದೆ. ಸೆಕ್ಷನ್ 7ಸಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಪರಿಶಿಷ್ಟ ಜಾತಿ, ವರ್ಗದವರ ಬೆಂಬಲಿಗರಾಗಿ ಅವರುಗಳನ್ನೇ ತುಳಿಯುತ್ತಿರುವ ಸಿದ್ದರಾಮಯ್ಯ ಹಾಗೂ ಡಾ.ಎಚ್.ಸಿ. ಮಹದೇವಪ್ಪ ಅವರ ವಿರುದ್ಧ ಪರಿಶಿಷ್ಟರು ಧ್ವನಿ ಎತ್ತಬೇಕಿದೆ. ಇಬ್ಬರೂ ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯನ್ವಯ ಬಂಧಿಸಲು ಹಾಗೂ ಕ್ರಿಮಿನಲ್ ಮೊಕದ್ದಮೆ ದಾಖಲಾಗುವವರೆಗೂ ರಾಜ್ಯಾದಂತ ಪ್ರತಿಭಟಿಸಲಾಗುತ್ತದೆ. ಹಣ ವರ್ಗಾವಣೆ ತಡೆ ಕೋರಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕಿ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…