ಮೈಸೂರು

ಅರಣ್ಯದಂಚಿನ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಶಾಸಕ ಚಿಕ್ಕಮಾದು ಸೂಚನೆ

ಮೈಸೂರು : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಅರಣ್ಯ ಪ್ರದೇಶದ ಹಂಚಿನಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಉಂಟಾಗಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರಣ್ಯ ಭಾಗದಲ್ಲಿ ವಾಸವಾಗಿದ್ದ ಕೆಲವರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ ಆದರೆ ಅವರ ಬಳಿ ಹಕ್ಕು ಪತ್ರ ಇಲ್ಲ. ಇಂತಹ ಸಮಸ್ಯೆಗಳನ್ನು ಪರಿಹರಿಸಿ ಎಂದರು.

ಡಿ.ಬಿ.ಕುಪ್ಪೆಯಲ್ಲಿ 376 ಜನರಿಗೆ ಜಮೀನಿನ ಹಕ್ಕು ಪತ್ರ ನೀಡಲು ದಾಖಲೆಗಳನ್ನು ಪರಿಶೀಲಿಸಲಾಗಿದೆ. ತಿರಸ್ಕೃತಗೊಂಡಿರುವ 90 ಹಕ್ಕು ಪತ್ರಗಳನ್ನು ಮರು ಪರಿಶೀಲಿಸಿ ಅದರಲ್ಲಿ ಅರ್ಹರಿದ್ದಲ್ಲಿ ಹಕ್ಕು ಪತ್ರ ನೀಡಿ ಎಂದರು.

ಇದನ್ನೂ ಓದಿ:-ಹೆಬ್ಬಾಳದಲ್ಲೂ ನಡೆದಿತ್ತು ಮತ ಕಳವು : ಕ್ಷೇತ್ರದ ಶಾಸಕ, ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ

ಈ ಹಿಂದೆ ನೀಡಲಾಗಿರುವ ಕೆಲವು ಹಕ್ಕು ಪತ್ರಗಳಲ್ಲಿ ಅವರ ಮಕ್ಕಳ ಹೆಸರು ನಮೂದಿಸಿರುವುದಿಲ್ಲ. ಇದರಿಂದ ಮಕ್ಕಳು ಹಕ್ಕು‌ ಪಡೆಯಲು ಸಮಸ್ಯೆಯಾಗುತ್ತಿದ್ದು, ಸರಿಪಡಿಸಬೇಕಿದೆ ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ಹೆಚ್.ಡಿ ಕೋಟೆ ತಾಲೂಕಿನ ಹರಿಹರಪುರ ಗ್ರಾಮದ ಸರ್ವೆ ನಂ 3 ರಲ್ಲಿ 530 ಎಕರೆ ಭೂಮಿಯಲ್ಲಿ 370 ಎಕರೆ ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿದ್ದು, ಉಳಿದಿರುವ 160 ಎಕರೆಯಲ್ಲಿ ಈಗಾಗಲೇ ಮಂಜೂರು ಮಾಡಿ ಉಳಿದಿರುವ 30 ಎಕರೆ ಭೂಮಿಯನ್ನು ಮಂಜೂರು ಮಾಡಲು ಕ್ರಮವಹಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಯುಕೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ

ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…

5 hours ago

3 ಮಸೂದೆಗಳಿಗೆ ರಾಜ್ಯಪಾಲರ ನಕಾರ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…

5 hours ago

ಮೈಸೂರು | ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆಗೆ ಸಿದ್ಧತೆ

ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…

5 hours ago

ಮುಂದಿನ ಚುನಾವಣೆಯಲ್ಲಿ NDA 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುತ್ತೆ : ನಿಖಿಲ್ ಕುಮಾರಸ್ವಾಮಿ ಭರವಸೆ

ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…

10 hours ago

ಪ್ರತ್ಯೇಕವಾಗಿದ್ದ ದಂಪತಿ ನಡುವೆ ಕಿರಿಕ್ ; ಪತ್ನಿ ಕೊಲೆಯಲ್ಲಿ ಅಂತ್ಯ

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…

10 hours ago

ಸಿಎಂ ಕ್ಷೇತ್ರದಲ್ಲಿನ ಸಮಸ್ಯೆ ಬಗೆಹರಿಸಿ : ಅಧಿಕಾರಿಗಳಿಗೆ ಯತೀಂದ್ರ ಸೂಚನೆ

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…

10 hours ago