ಮೈಸೂರು

ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಶಾಸಕ ಡಿ.ರವಿಶಂಕರ್

ಕೆ.ಆರ್‌ ನಗರ/ಮೈಸೂರು: ಮೈದುಂಬಿ ಹರಿಯುತ್ತಿರುವ ಕಾವೇರಿ ನದಿಗೆ ಬಳ್ಳೂರು ಬಳಿಯ ಚಾಮರಾಜ ಎಡದಂಡೆಯ ಬಳಿ ಕೆ.ಆರ್‌ ನಗರ ಶಾಸಕ ಡಿ.ರವಿಶಂಕರ್‌ ಪೂಜೆ ಸಲ್ಲಿಸಿ ರೈತನ ಬಾಳು ಹಸನಾಗಿ ಅನ್ನದಾತನಿಗೆ ಶುಭವಾಗಲೆಂದು ಪ್ರಾರ್ಥಿಸಿ ನಾಲೆಗಳಿಗೆ ನೀರು ಹರಿಸಿ ಬಾಗಿನ ಅರ್ಪಿಸಿದರು.

ಬಳಿಕ ಮಾತನಾಡಿದ ಅವರು, ಕಳೆದ ಬಾರಿ ಬರಗಾಲ ಎದುರಿಸಿದ್ದ ಅನ್ನದಾತನಿಗೆ ಈ ಬಾರಿ ವರುಣ ಕೃಪೆ ತೋರಿದ್ದಾನೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ನದಿ, ಡ್ಯಾಮ್, ಅಣೆಕಟ್ಟೆಗಳು ಸೇರಿದಂತೆ ಕೆರೆಕಟ್ಟೆಗಳು ತುಂಬಿದೆ. ಹೀಗಾಗಿ ಕೆರೆಕಟ್ಟೆಗಳು ಹಾಗೂ ನಾಲೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಅಂತೆಯೇ ನೀರು ಹರಿಸಲಾಗುತ್ತಿದೆ  ಎಂದರು.

ಹವಾಮಾನ ಇಲಾಖೆ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ ಬೀಳುತ್ತದೆ ಎಂದು ಹೇಳಿದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗದೆ ಕೃಷಿ ಚಟುವಟಿಕೆ ಹಾಗೂ ಬಿತ್ತನೆ ಕಾರ್ಯ ಆರಂಭಿಸಿ ಎಂದು ಹೇಳಿದರು.

ಮುಂಗಾರು ಹಂಗಾಮಿನ ಕೃಷಿಗೆ ಯಾವುದೇ ರೀತಿಯಲ್ಲಿ ರೈತರಿಗೆ ತೊಂದರೆಯಾಗದಂತೆ ಅಗತ್ಯತೆ ಕೈಗೊಳ್ಳುವಂತೆ ಹಾಗೂ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಹಲವು ತಳಿಯ ಭತ್ತದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳನ್ನು ಸಕಾಲದಲ್ಲಿ ರೈತರಿಗೆ ಪೂರೈಸಲು ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

25 mins ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

44 mins ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

1 hour ago

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

3 hours ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

3 hours ago