ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುಡುಮಾದನಹಳ್ಳಿಯಲ್ಲಿ ರಾಜ್ಯ ಸರ್ಕಾರ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ರೈತರು ಆಸ್ಪತ್ರೆ ನಿರ್ಮಾಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಂಡವಪುರ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗಿಯಾಗಿ ತಾವು ರೈತರ ಪರ ಎಂದು ಹೇಳಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಗುಡುಮಾದನಹಳ್ಳಿ ರೈತರು, ಯಾವುದೇ ಕಾರಣಕ್ಕೂ ಕೃಷಿ ಜಮೀನಿನಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡುವುದು ಬೇಡ ಎಂದು ಆಗ್ರಹಿಸುತ್ತಿದ್ದಾರೆ.
ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು, ಸ್ಥಳೀಯ ರೈತರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ವಿವಿಧ ರೈತ ಮುಖಂಡರು ಭಾಗಿಯಾಗಿದ್ದರು.





