ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ ತಡರಾತ್ರಿ ವೇಳೆ ಶಾಸಕ ದರ್ಶನ್ ಒಬ್ಬರೇ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವ್ಯವಸ್ಥೆಗಳನ್ನು ವೀಕ್ಷಿಸಿದ್ದಾರೆ. ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ, ತುರ್ತು ಚಿಕಿತ್ಸಾ ವಿಭಾಗದ ಕಾರ್ಯವೈಖರಿ, ಸ್ವಚ್ಛತೆ ಮತ್ತು ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿದರು. ಇದೇ ವೇಳೆ ರೋಗಿಗಳು ಹಾಗೂ ಅವರ ಸಂಬಂಧಿಕರೊಂದಿಗೆ ಮಾತುಕತೆ ನಡೆಸಿ ಚಿಕಿತ್ಸೆ, ಔಷಧಿ ಲಭ್ಯತೆ ಮತ್ತು ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಆಗಮಿಸುವ ತಾಯಿ ಮತ್ತು ಮಕ್ಕಳಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾತ್ರಿ ಸಮಯದಲ್ಲಿಯೂ ಸಮರ್ಪಕ ಸೇವೆ ಒದಗಿಸುವುದು ಅತ್ಯಂತ ಅಗತ್ಯ ಎಂದು ತಿಳಿಸಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…