Mysore
25
few clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ನಂಜನಗೂಡು| ನಾಲ್ಕು ಜಯಂತಿಗಳ ಆಚರಣೆ ಕುರಿತು ಸಭೆ ನಡೆಸಿದ ದರ್ಶನ್‌ ಧ್ರುವನಾರಾಯಣ್‌

ನಂಜನಗೂಡು: ಇಂದು ನಂಜನಗೂಡು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ನಾಲ್ಕು ಜಯಂತಿಗಳ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಯುವ ಶ್ರೀ ದೇವರ ದಾಸಿಮಯ್ಯ ಜಯಂತಿ ಮತ್ತು ಡಾ. ಬಾಬು ಜಗಜೀವನ್ ರಾಂ ಜಯಂತಿ, ಶ್ರೀ ಮಹಾವೀರ ಜಯಂತಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿ ಆಚರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿಂದು ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಪೂರ್ವಭಾವಿ ಸಭೆ ನಡೆಸಿದರು.

ಈ ವೇಳೆ ಸಭೆಯಲ್ಲಿ ಸಂಘಟಕರು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಬಳಿಕ ಮಾತನಾಡಿದ ಶಾಸಕ ದರ್ಶನ್‌ ಧ್ರುವನಾರಾಯಣ್‌ ಅವರು, ಮೂರು ಜಯಂತಿಗಳನ್ನು ತಾಲ್ಲೂಕು ಕಚೇರಿಯಲ್ಲಿ ಆಚರಣೆ ಮಾಡಲಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಮತ್ತೊಂದು ನಿಗದಿತ ದಿನಾಂಕ ಆಯ್ಕೆ ಮಾಡಿ ಅದ್ದೂರಿಯಾಗಿ ಆಚರಣೆ ಮಾಡೋಣ ಎಂದರು.

ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್, ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ ಸೇರಿದಂತೆ ನಗರಸಭೆ ಸದಸ್ಯರುಗಳು, ಹಲವು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Tags:
error: Content is protected !!