ಮೈಸೂರು : ತಾಲೂಕಿನ ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿದ್ದ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಾಸಕ ಜಿ.ಟಿ ದೇವೇಗೌಡ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿಗೆ ಗ್ರಾಮದ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗೂ ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿ, ದವಸ ಧಾನ್ಯ, ಬಟ್ಟೆ, ಪಾತ್ರೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು.
ಶಾಸಕ ಜಿ.ಟಿ ದೇವೇಗೌಡ ಬೆಂಕಿಗೆ ಅನಾಹುತವಾದ 3 ಮನೆಗಳ ಕುಟುಂಬಗಳಿಗೆ ವೈಯಕ್ತಿಕವಾಗಿ ತಲಾ ಒಂದು ಲಕ್ಷ ರೂ ಪರಿಹಾರ ನೀಡಿದರು. ಅಲ್ಲದೇ ಶೀಘ್ರವೇ ಸರ್ಕಾರದಿಂದ ಪರಿಹಾರ ನೀಡವ ಭರವಸೆ ನೀಡಿದರು.
ಸ್ಥಳಕ್ಕೆ ಸೆಸ್ಕಾಂ ಎಂ.ಡಿ. ಮುನಿಗೋಪಾಲ್ ರಾಜ್, ಎಸ್.ಸಿ.ಸುನೀಲ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಗಳೊಡನೆ ಸ್ಥಳ ಪರಿಶೀಲನೆ ನಡೆಸಿದರು.