ಹುಣಸೂರು: ಬಹಳಷ್ಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದ ರಸ್ತೆ ಅಭಿವೃದ್ದಿ ಕಾರ್ಯಗಳಿಗೆ ಸರ್ಕಾರದಿಂದ ವಿಶೇಷ ಅನುದಾನ ತರುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ದಿಗಾಗಿ ಸರ್ಕಾರಕ್ಕೆ ಮನವಿ ಅನುದಾನ ತರಲಾಗುತ್ತಿದೆ. ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಗಮನಹರಿಸಬೇಕಿದೆ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.
ತಾಲೂಕಿನ ಬಿಳಿಕೆರೆ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ೧೩.೫೦ ಕೋಟಿ ರೂ.ಗಳ ವೆಚ್ಚದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ನಂತರ ತೆಂಕಲಕೊಪ್ಪಲು ಗ್ರಾಮದ ಗುರುಮಠ ಆವರಣದಲ್ಲಿ ಆಯೋಜನೆಗೊಂಡಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಹಲವು ಗ್ಯಾರಂಟಿ ಯೋಜನೆಗಳ ನಡುವೆಯೂ ತಾಲೂಕಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ಅಭಾಧಿತವಾಗಿ ನಡೆಯುವಂತೆ ಪ್ರತಿದಿನ ಸರ್ಕಾರದ ವಿವಿದ ಇಲಾಖೆಗಳ ಸಚಿವರನ್ನು ಭೇಟಿಯಾಗಿ ಅನುದಾನ ತರುತ್ತಿದ್ದೇನೆ.
ತಾಲೂಕಿನಲ್ಲಿ ಶಾಸಕರಿಂದ ಅನುದಾನ ತರಲು ಸಾಧ್ಯವಿಲ್ಲ ಎನ್ನುವ ಚರ್ಚೆಗಳು ನಡೆಯುತ್ತಿರುವುದನ್ನು ಬಲ್ಲೆ. ಆದರೆ ನನ್ನನ್ನು ಆರಿಸಿ ಶಾಸಕನನ್ನಾಗಿಸಿರುವ ಜನರ ಒಳಿತಿಗಾಗಿ ನಾನು ಅವಿರತ ಶ್ರಮಿಸುತ್ತಿದ್ದೇನೆ. ಮುಂದೆಯೂ ಶ್ರಮಿಸುತ್ತೇನೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಯಿಂದ ಆರಂಭಗೊಂಡು, ಲೋಕೋಪಯೋಗಿ, ನೀರಾವರಿ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಚಿವರನ್ನು ಸತತ ಭೇಟಿಯಾಗುತ್ತಲೇ ತಾಲೂಕಿನ ಸಮಸ್ಯೆಗಳ ಕುರಿತು ಮಾಹಿತಿ ನೀಡಿ ಅನುದಾನ ಪಡೆಯುತ್ತಿದ್ದೇನೆ ಎಂದರು.
ಎಲ್ಲೆಲ್ಲಿ ಏನೇನು ಭೂಮಿ ಪೂಜೆ:
ತೆಂಕಲಕೊಪ್ಪಲು ಗ್ರಾಮದಲ್ಲಿ ೧೦ ಕೋಟಿ ರೂ.ವೆಚ್ಚದಡಿ ೩.೯೨ ಕಿ.ಮೀ.ಉದ್ದದ ತೆಂಕಲಕೊಪ್ಪಲು_ಚೋಳೇನಹಳ್ಳಿ-ಬೋಳನಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಹುಸೇನ್‌ಪುರ, ಶಿರಿಯೂರು ಮತ್ತು ರಾಯನಹಳ್ಳಿ ನಾಲೆಗಳ ಅಭಿವೃದ್ಧಿಗಾಗಿ ತಲಾ ೧ ಕೋಟಿ ರೂ.ಗಳ ವೆಚ್ಚದಡಿ(ಒಟ್ಟು ೩ ಕೋಟಿ ರೂ.ಗಳು) ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ೮.೪೦ ಲಕ್ಷ ರೂ.ವೆಚ್ಚದಡಿ ತೆಂಕಲಕೊಪ್ಪಲು ಗ್ರಾಮದಲ್ಲಿ ಗ್ರಾ.ಪಂ. ಸುಪರ್ದಿಯ ೨ ಮಾರಾಟ ಮಳಿಗೆಗಳು ಮತ್ತು ಕೊಮ್ಮೇಗೌಡನಕೊಪ್ಪಲು ಗ್ರಾಮದಲ್ಲಿ ಒಂದು ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು. ಅಲ್ಲದೇ ಹುಸೇನ್‌ಪುರ ಮತ್ತು ತೆಂಕಲಕೊಪ್ಪಲು ಗ್ರಾಮದಲ್ಲಿ ತಲಾ ೮ ಲಕ್ಷ ರೂ.ವೆಚ್ಚದಡಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು.
ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…
ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…
ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…
ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…
ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ.…