ಮೈಸೂರು: 50-60 ವರ್ಷ ದೇಶದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್ ಸರ್ಕಾರ ಮಾಡಲಾಗದ ಕೆಲಸಗಳನ್ನು ಕೇವಲ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ ಎಂದು ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೋದಿ ಅವರೇ ಸಾಟಿ, ಅವರಿಗೆ ಬೇರೆ ಯಾರ ಹೋಲಿಕೆಯೂ ಸಲ್ಲದು. ಕಾಂಗ್ರೆಸ್ಸೇತರ ಸರ್ಕಾರಗಳಲ್ಲಿ ದೀರ್ಘಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ ಹೆಗ್ಗಳಿಕೆ ನರೇಂದ್ರಮೋದಿ ಅವರಿಗೆ ಸಲ್ಲುತ್ತದೆ ಎಂದು ಶ್ರೀವತ್ಸ ಸೋಮವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದರು.
ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಮಹಿಳೆಯರ ಅಭಿವೃದ್ದಿಗೆ ಹೆಚ್ಚು ಒತ್ತನ್ನು ಕೊಟ್ಟಿದೆ. ಭೀಮ ಸಖಿ ಯೋಜನೆ ಮೂಲಕ ಮಹಿಳೆಯರಿಗೆ ಎಐಸಿ ಇನ್ಶುರೆನ್ಸ್ ವ್ಯವಸ್ಥೆ ಜಾರಿಗೆ ತಂದಿದೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೇ ದೇಶದ ಆಡಳಿತ ನಡೆಸುತ್ತಿದೆ ಎಂದು ಶ್ರೀವತ್ಸ ನುಡಿದರು.





