Mysore
21
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಸಿಎಂ ಸಿದ್ದರಾಮಯ್ಯ ಸ್ವಾಭಿಮಾನಿ ಸಮಾವೇಶ ಟೀಕಿಸಿದ ಶ್ರೀವತ್ಸ

ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿ ಸಿದ್ದರಾಮಯ್ಯ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದಾರೆ. ಈ ಸಮಾವೇಶದಿಂದ ಕೇಂದ್ರ ನಾಯಕರಿಗೆ ನಾನು ಎಷ್ಟೊಂದು ಪ್ರಭಾವಿ ಎಂದು ತೋರಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇದೇ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವಾಗಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ರಾಜ್ಯಾದ್ಯಾಂತ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಕ್ಕ ತರಲು ಪರದಾಡುತ್ತಿದ್ದಾರೆ. ಹೀಗಾಗಿ ಬಿಪಿಎಲ್‌ ಕಾರ್ಡ್‌ಗಳ ಪರಷ್ಕರಣೆಗೆ ಇಳಿದಿದೆ. ಅಲ್ಲದೇ ವಿರೋಧ ಪಕ್ಷವಾಗಿ ನಾವು ಸಾರ್ವಜನಿಕರಿಗೆ ಸರ್ಕಾರದ ನಡೆಯನ್ನು ತಿಳಿಸುವಲ್ಲಿ ಎಲ್ಲೋ ಒಂದು ಕಡೆ ವಿಫಲರಾದೆವಾ ಎಂದು ಕಾಣುತ್ತದೆ ಎಂದಿದ್ದಾರೆ.

Tags:
error: Content is protected !!