ಮೈಸೂರು: ಸಿಎಂ ಸಿದ್ದರಾಮಯ್ಯ ತಾನು ರಾಜ್ಯದಲ್ಲಿ ಎಷ್ಟು ಪ್ರಭಾವಿ ಎಂದು ಕೇಂದ್ರ ನಾಯಕರ ಮುಂದೆ ತೋರಿಸಿಕೊಳ್ಳಲು ಹಾಸನದಲ್ಲಿ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಇಂದು(ಜ.29) ಹಾಸನದಲ್ಲಿ ಸ್ವಾಭಿಮಾನಿ ಸಿಎಂ ಸಿದ್ದರಾಮಯ್ಯ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿ ಸಿದ್ದರಾಮಯ್ಯ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದಾರೆ. ಈ ಸಮಾವೇಶದಿಂದ ಕೇಂದ್ರ ನಾಯಕರಿಗೆ ನಾನು ಎಷ್ಟೊಂದು ಪ್ರಭಾವಿ ಎಂದು ತೋರಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಇದೇ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನವಾಗಿರುವ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯಾದ್ಯಾಂತ ಗ್ಯಾರಂಟಿ ಯೋಜನೆಗಳನ್ನು ಸಮಪರ್ಕವಾಗಿ ಅನುಷ್ಠಾನಕ್ಕ ತರಲು ಪರದಾಡುತ್ತಿದ್ದಾರೆ. ಹೀಗಾಗಿ ಬಿಪಿಎಲ್ ಕಾರ್ಡ್‌ಗಳ ಪರಷ್ಕರಣೆಗೆ ಇಳಿದಿದೆ. ಅಲ್ಲದೇ ವಿರೋಧ ಪಕ್ಷವಾಗಿ ನಾವು ಸಾರ್ವಜನಿಕರಿಗೆ ಸರ್ಕಾರದ ನಡೆಯನ್ನು ತಿಳಿಸುವಲ್ಲಿ ಎಲ್ಲೋ ಒಂದು ಕಡೆ ವಿಫಲರಾದೆವಾ ಎಂದು ಕಾಣುತ್ತದೆ ಎಂದಿದ್ದಾರೆ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…