ಮೈಸೂರು : ನಗರದ ಸಿದ್ದಪ್ಪ ವೃತ್ತದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿ ಗಾಯಗೊಂಡ ಗಾಯಾಳುಗಳನ್ನು ಬಿಜೆಪಿ ಶಾಸಕ ಟಿಎಸ್ ಶ್ರೀವತ್ಸ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಘಟನೆ ನಡೆದಿರುವ ರಸ್ತೆ ಮಾರ್ಗದಲ್ಲಿ ಶಾಸಕ ಶ್ರೀವತ್ಸ ಕಚೇರಿಗೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಕಂಡು ಸ್ಥಳಕ್ಕಾಗಮಿಸಿದ ಶಾಸಕರು ಗಾಯಾಳುಗಳನ್ನು ಆಟೋದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಈ ಸಂಬಂಧ ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





