ಮೈಸೂರು: ಮೈಸೂರು-ಕೊಡಗು ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಹೇಳಿಕೆ ನೀಡಿದ್ದ ಹಳ್ಳಿಹಕ್ಕಿ ಎಚ್. ವಿಶ್ವನಾಥ್ ಅವರಿಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಉಮೇದುವಾರಿಗೆ ವಾಪಾಸ್ ಪಡೆದರೇ ಅವಿರೋಧವಾಗಿ ಆಯ್ಕೆಯಾಗುತ್ತದೆಯಾ ಎಂದು ಶಾಸಕ ಸೇಠ್ ಪ್ರಶ್ನೆ ಮಾಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ವಿಶ್ವನಾಥ್ ಅವರಿಗೆ ವಯಸ್ಸಿನ ಸಮಸ್ಯೆ. ಹಾಗಾಗಿ ಏನೇನೋ ಮಾತನಾಡುತ್ತಾರೆ, ಅವರ ಮಾತಿನ ಮೇಲೆ ಅವರಿಗೆ ಗಮನ ಇರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಈಗಾಗಲೇ 15ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಲಕ್ಷ್ಮಣ್ ಮಾತ್ರ ಉಮೇದುವಾರಿಗೆ ವಾಪಾಸ್ ಪಡೆದರೇ ಅವಿರೋಧವಾಗಿ ಹೇಗೆ ಆಯ್ಕೆ ಮಾಡಿದಂತಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನ್ನೋದು ಒಂದು ಪ್ರಕ್ರಿಯೆಯಗಿದ್ದು, ಪ್ರತಿಸ್ಪರ್ಧಿಯೊಂದಿಗೆ ಚುನಾವಣೆ ನಡೆಯಬೇಕು ಎಂದು ಕಿಡಿಕಾರಿದ್ದಾರೆ.
ವಿಶ್ವನಾಥ್ ಅವರು ಆಲ್ ಇಂಡಿಯಾ ಟೂರ್ ಹೊಡೆದು ಬಂದಿದ್ದರೂ ಇನ್ನು ಬುದ್ದಿ ಬಂದಿಲ್ಲ ಎನಿಸುತ್ತಿದೆ. ಮೊದಲು ಅವರು ಯಾವ ಪಕ್ಷದಲ್ಲಿ ಇದ್ದಾರೆ ಎಂಬುದನ್ನು ಖಚಿತಪಡಿಸಲಿ. ಅವರ ಹೇಳಕೆಯಿಂದ ನಮಗೆನೂ ಹಿನ್ನಡೆಯಾಗಲ್ಲ. ಮೈಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಪಡೆಯುವ ಎಲ್ಲಾ ವಾತಾವರಣವಿದೆ ಎಂದು ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…