ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ಗೆ ಬಿಜೆಪಿ ನಾಯಕರೂ ಹಲಾಲ್ ಬಜೆಟ್ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ ಎಂಬ ಪದವನ್ನು ಬಿಟ್ಟು ರಾಜಕೀಯ ಮಾಡಲಿ. ಮುಸಲ್ಮಾನರ ಹೆಸರು ಬಳಸದೆ ಸಂಘಟನೆ ಮಾಡಬೇಕು. ನಮ್ಮ ಸಮುದಾಯದ ಹೆಸರು ಹೇಳಿ ರಾಜಕೀಯ ಮಾಡುತ್ತಿರುವುದೇ ಬಿಜೆಪಿ ಪಕ್ಷ, ಅದೇ ಅವರ ಬಂಡವಾಳವಾಗಿದೆ. ರಾಷ್ಟ್ರದಲ್ಲಿ ಶೇ.20ರಷ್ಟು ಜನಸಂಖ್ಯೆ ಇದೆ. ಆದರೂ ದೇಶಕ್ಕಾಗಿ ನೀಡಿರುವ ಕೊಡುಗೆ ಅಪಾರವಾಗಿದ್ದು, ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತ್ಯಾಗ ಬಲಿದಾನ ಮಾಡಿದ್ದೇವೆ. ಆದರೆ ಬ್ರಿಟಿಷರ ಬೂಟ ಅನ್ನು ನೆಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರದಿಂದ ಮುಸಲ್ಮಾನ ಸಮುದಾಯಕ್ಕೆ ಏನಾದರೂ ಘೋಷಣೆ ಮಾಡಿದರೆ ಸಾಕು, ಬಿಜೆಪಿ ಪಕ್ಷಕ್ಕೆ ಹೊಟ್ಟೆ ಉರಿ ಶುರುವಾಗುತ್ತೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್‌ನಲ್ಲಿ ಎಲ್ಲರಿಗೂ ಒತ್ತು ನೀಡಿದೆ. ಶಿಕ್ಷಣ, ಕೈಗಾರಿಕೆ, ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲದಕ್ಕೂ ಸಹ ಅನುದಾನ ನೀಡಿದೆ. ಹೀಗಾಗಿ ಬಿಜೆಪಿ ಅವರು ಏನು ಬೇಕಾದರೂ ಹೇಳಲಿ. ಈ ಬಾರಿಯ ಬಜೆಟ್ ರಾಜ್ಯ ಅಭಿವೃದ್ಧಿಗೆ ಪೂರಕವಾಗಿದೆ. ಹೀಗಾಗಿ ಹಲಾಲ್ ಎಂದರೂ ನಾವೇನೂ ಬೇಸರ ಮಾಡಿಕೊಳ್ಳುವುದಿಲ್ಲ. ಭಾರತ ನಮ್ಮ ದೇಶವಾಗಿದೆ. ಅವರಿಗೆ ಈ ದೇಶದಲ್ಲ ಇರಲು ಎಷ್ಟು ಹಕ್ಕು ಇದೆಯೋ ಅಷ್ಟೇ ಹಕ್ಕು ನಮಗೂ ಇದೆ ಎಂದು ಟಾಂಗ್ ನೀಡಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…